

ಶಿಶಿಲ ಶ್ರೀ ಮತ್ಯತೀರ್ಥ ಪ್ರಖ್ಯಾತ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ನಿರ್ಮಾಣವಾದ ನೂತನ ಅನ್ನಛತ್ರ ಪ್ರಾರಂಭೋತ್ಸವವು ಇದೇ ಸೋಮವಾರ ನಡೆಯಲಿದೆ.
ಬೆಳಗ್ಗೆ ಗಣಹೋಮ, ಮಧ್ಯಾಹ್ನ ಮಹಾಪೂಜೆ ಬಳಿಕ ನೂತನ ಅನ್ನಛತ್ರ ಪ್ರಾರಂಭೋತ್ಸವ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಮೂಡೆತ್ತಾಯ, ಶಾಸಕ ಹರೀಶ್ ಪೂಂಜ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಆನಂದ ಪೂಜಾರಿ ಹಾಗೂ ಎಲ್ಲಾ ಸಮಿತಿಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಎಲ್ಲಾ ಭಕ್ತಾದಿಗಳು, ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.