Site icon Suddi Belthangady

ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಕ್ರೀಡಾಕೂಟ

ಬಂಗಾಡಿ: ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಕ್ರೀಡಾಕೂಟ 2023-24 ವಾರ್ಷಿಕೋತ್ಸವದ ಪ್ರಯುಕ್ತ ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಯ ಕ್ರೀಡಾಂಗಣದಲ್ಲಿ ನ.4 ರಂದು ಎಲ್ಲಾ ಪೋಷಕರಿಗಾಗಿ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, ಈ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಶಾಲಾ ಸಂಚಾಲಕರಾಗಿರುವ ವಂದನೀಯ ಫಾದರ್ ಸೆಬಾಸ್ಟಿಯನ್, ಶಾಲಾ ಮುಖ್ಯ ಶಿಕ್ಷಕಿ ವಂದನೀಯ ಸಿಸ್ಟರ್ ಶೆರಿನ್ ವೇದಿಕೆಯಲ್ಲಿರುವ ಎಲ್ಲಾ ಗಣ್ಯರ ಹಾಗೂ ಕ್ರೀಡಾ ಸಾಧನೆಯನ್ನು ಮಾಡಿರುವ ಎಲ್ಲಾ ವಿದ್ಯಾರ್ಥಿಗಳ ದಿವ್ಯ ಹಸ್ತದಲ್ಲಿ ಮಾಡಲಾಯಿತು.

ಬಳಿಕ ಪೋಷಕರಿಗಾಗಿ ಅನೇಕ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು.ಶಾಲಾ ಸಹ ಶಿಕ್ಷಕಿ ಜಯಲಕ್ಷ್ಮಿ ಸ್ವಾಗತಿಸಿದರು.ಶಾಲಾ ಸಹ ಶಿಕ್ಷಕ ಕೃಷ್ಣಪ್ಪ ನಿರೂಪಿಸಿದರು ಧನ್ಯವಾದವಿತ್ತರು.ಶಿಕ್ಷಕರ ಮತ್ತು ಪೋಷಕರ ಸಹಕಾರದಿಂದ ಕ್ರೀಡಾಕೂಟ ಯಶಸ್ವಿಯಾಯಿತು.

Exit mobile version