ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ನ.4 ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಶಾಲಾ ಕನ್ನಡ ಸಂಘದ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ನಿರ್ವಹಿಸಿದರು.ನಾಡಗೀತೆಯನ್ನು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ವಿದ್ಯಾರ್ಥಿ ಆಲೆನ್ ಸಿ ವಿ ಕನ್ನಡ ರಾಜ್ಯೋತ್ಸವದ ಆಚರಣೆಯ ಮಹತ್ವ ಮತ್ತು ಹಿನ್ನೆಲೆಯನ್ನು ತಿಳಿಸಿದರು.
ಕನ್ನಡ ಸಂಘದ ವಿದ್ಯಾರ್ಥಿಗಳು ಕನ್ನಡ ನಾಡು, ನುಡಿ, ಸಂಸ್ಕೃತಿಯನ್ನು ಮನರಂಜನಾ ಕಾರ್ಯಕ್ರಮಗಳ ಮೂಲಕ ತೋರ್ಪಡಿಸಿದರು.
ಶಾಲಾ ಸಂಚಾಲಕರಾದ ಅತೀ ವಂ.ಫಾ.ವಾಲ್ಟರ್ ಡಿಮೆಲ್ಲೋ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ವಂ.ಫಾ.ಕ್ಲಿಫರ್ಡ್ ಪಿಂಟೋರವರು ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಶುಭ ಸಂದೇಶಗಳನ್ನು ನೀಡಿದರು.
ವಿದ್ಯಾರ್ಥಿನಿಯರಾದ ವಿಯೋನ ರೇಗೋ ಮತ್ತು ಮಲ್ಲಿಕಾ ಕಾರ್ಯಕ್ರಮ ನಿರೂಪಿಸಿದರು.ಸಹ ಶಿಕ್ಷಕಿಯರಾದ ಪಲ್ಲವಿ ಮತ್ತು ಸುಮಿತ್ರ ಸಹಕರಿಸಿದರು.