ಬೆಳ್ತಂಗಡಿ: ನ.4ರಂದು ಸಂತ ತೆರೇಸಾ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗವನ್ನು ಉದ್ಘಾಟಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷರಾಗಿ ಹಾಗೂ ಉದ್ಘಾಟಕರಾಗಿ ಮಂಗಳೂರು ಪ್ರಾಂತ್ಯದ ಶಿಕ್ಷಣ ಸಂಸ್ಥೆಯ ಸಂಯೋಜಕರಾದಂತಹ ಜುಲಿಯಾನ ಪಾಯ್ಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅಧ್ಯಕ್ಷೀಯ ನುಡಿಗಳನ್ನು ನುಡಿದರು.
ವೇದಿಕೆಯಲ್ಲಿ ಸಂತ ತೆರೇಸಾ ಕಾನ್ವೆಂಟಿನಾ ಸುಪಿರಿಯರ್ ಭಗಿನಿ ಜೆಸಿಂತ ಭರೆಟ್ಟೋ, ಸಂತ ತೆರೇಸಾ ಶಿಕ್ಷಣ ಸಂಸ್ಥೆಯ ಕರೆಸ್ಪಾಂಡೆಂಟ್ ಭಗಿನಿ ತೆರೇಸಿಯಾ ಸೇರಾ, ಸಂತ ತೆರೇಸಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯನಿ ಭಗಿನಿ ಲೀನಾ, ಶಿಕ್ಷಕರಕ್ಷಕ ಸಂಘದ ಉಪಾಧ್ಯಕ್ಷರಾದ ಡಾಕ್ಟರ್ ಅನ್ನ ಶಾಂತಿ, ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಹೆರಾಲ್ಡ್ ನೋರೋನ್ನ ಹಾಗೂ ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಭಗಿನಿ ಆರೋಗ್ಯರವರು ಉಪಸ್ಥಿತರಿದ್ದರು.
ಪ್ರಾಂಶುಪಾಲರು ಬಂದ ಅತಿಥಿಗಳನ್ನು ಸ್ವಾಗತಿಸಿದರು.ಉಪನ್ಯಾಸಕರಾದ ನ್ಯಾನ್ಸಿ ಹಾಗೂ ಝೀಟಾ ರವರು ಕಾರ್ಯಕ್ರಮವನ್ನು ನಿರೂಪಿಸಿ, ಪ್ರತೀಕ್ಷಾರವರು ವಂದಿಸಿದರು.
ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಿ ಮನೋರಂಜಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.