ಧರ್ಮಸ್ಥಳ: ಬೊಳ್ಮನಾರು ಜನನಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

0

ಧರ್ಮಸ್ಥಳ: ಧರ್ಮಸ್ಥಳ ಬೊಳ್ಮನಾರು ಜನನಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಬೊಳ್ಮನಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಉಜಿರೆ ಎಸ್.ಡಿ.ಎಂ ಕಾಲೇಜಿನ MSW ವಿಭಾಗದ ಸಹಾಯಕ ಪ್ರಾದ್ಯಾಪಕಿ ಸ್ವಾತಿ ರವರು ನೆರವೇರಿಸಿ ಪ್ರತಿಯೊಬ್ಬ ಮಹಿಳೆ ತನ್ನ ಬಗ್ಗೆ ಯೋಚನೆ ಮಾಡದೇ ತನ್ನ ಗಂಡ ಮಕ್ಕಳು ಕುಟುಂಬದ ಒಳಿತಿನ ಬಗ್ಗೆ ಯೋಚನೆ ಮಾಡ್ತಾಳೆ. ಅವಳಿಗೂ ಮಾನಸಿಕ ನೆಮ್ಮದಿ ಬೇಕು.ಅವಳ ಆರೋಗ್ಯದ ಬಗ್ಗೆ ಗಮನಹರಿಸಬೇಕು.ಇವತ್ತು ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಬಹಳಷ್ಟು ಮಾಹಿತಿಯನ್ನು ಪಡೆದುಕೊಂಡಿದ್ದೀರಿ.ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರಹಾಕಲು ಈ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದ್ದು ಇದರ ಸದುಪಯೋಗ ಪಡೆಯುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷ ಅನಿತಾ ಜಯಂತ ಗೌಡರವರು ಮಾತನಾಡುತ್ತಾ ಇವತ್ತು ಪ್ರತಿಯೊಬ್ಬ ವ್ಯಕ್ತಿಯೂ ಅಭಿವೃದ್ಧಿಯಾಗಿದ್ದಾರೆಂದರೆ ಅದು ಗ್ರಾಮಾಭಿವೃದ್ದಿ ಯೋಜನೆಯ ಜ್ಞಾನ ವಿಕಾಸ ಕಾರ್ಯಕ್ರಮದಿಂದ.ಮಹಿಳೆಯರು ಅದೆಷ್ಟೋ ಬದಲಾವಣೆಯನ್ನು ಹೊಂದಿರುತ್ತಾರೆ ಎಂದರು.

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಯಶವಂತ್ ರವರು ಮಾತನಾಡುತ್ತಾ ಮಹಿಳೆಯರು ನಾಲ್ಕು ಗೋಡೆಯ ಮಧ್ಯದಿಂದ ಹೊರಬಂದು ಸಮಾಜದಲ್ಲಿ ಗೌರವಯುತರಾಗಿ ಬದುಕಬೇಕಾದರೆ ಅದಕ್ಕೆ ಗ್ರಾಮಾಭಿವೃದ್ದಿ ಯೋಜನೆಯೇ ಕಾರಣ.ಕಾರ್ಯಕ್ರಮದ ಸದಪಯೋಗವನ್ನು ಎಲ್ಲರೂ ಪಡೆಯುವಂತೆ ತಿಳಿಸಿದರು.

ವೇದಿಕೆಯಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅದ್ಯಕ್ಷರಾದ ರಂಗನಾಥ್, ಒಕ್ಕೂಟದ ಅಧ್ಯಕ್ಷ ಶಶಿಧರ್ ಜಿ, ವಲಯ ಮೇಲ್ವಿಚಾರಕರಾದ ಪ್ರಶಾಂತ್ ರವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಞಾನ ಕೇಂದ್ರದ ಸದಸ್ಯರಾದ ಉಮ್ಮಕ್ಕರವರು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಹಾಜರಾತಿ & ಆಟೋಟ ಸ್ಪರ್ದೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು.ಜ್ಞಾನವಿಕಾಸ ಸಮನ್ವಯಧಿಕಾರಿಯವರಾದ ಮಧುರಾವಸಂತ್ರವರು ನಿರೂಪಿಸಿದ ಕಾರ್ಯಕ್ರಮದಲ್ಲಿ ಸದಸ್ಯರಾದ ಹರಿಣಾಕ್ಷಿ ಸ್ವಾಗತಿಸಿ, ಪುಷ್ಪ ರವರು ಧನ್ಯವಾದ ಮಾಡಿದರು.ಸೇವಾಪ್ರತಿನಿಧಿ ಆನಂದರವರು ವರದಿ ವಾಚಿಸಿದರು.

LEAVE A REPLY

Please enter your comment!
Please enter your name here