

ಬೆಳ್ತಂಗಡಿ: ಉಜಿರೆ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆದ ಪದವಿ ಪೂರ್ವ ವಿಭಾಗದ ಬಾಲಕ-ಬಾಲಕಿಯರ ಕ್ರೀಡಾಕೂಟದಲ್ಲಿ ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ 3 ವಿದ್ಯಾರ್ಥಿಗಳು 5 ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿ ನವೆಂಬರ್ 11 ರಂದು ನಡೆಯುವ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ದ್ವಿತೀಯ ವಾಣಿಜ್ಯ ವಿಭಾಗದ ಲೀಲಾವತಿ ಚಕ್ರ ಎಸೆತದಲ್ಲಿ ದ್ವಿತೀಯ ಹಾಗೂ ಹ್ಯಾಮರ್ ಎಸೆತದಲ್ಲಿ ತೃತೀಯ ಸ್ಥಾನ, ದ್ವಿತೀಯ ವಿಜ್ಞಾನ ವಿಭಾಗದ ನಿತೇಶ್ ಚಕ್ರ ಎಸೆತ ಹಾಗೂ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ, ದ್ವಿತೀಯ ವಾಣಿಜ್ಯ ವಿಭಾಗದ ಕೃತಿ 3000 ಮೀ.ಓಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಶ್ರಾವ್ಯ 3000 ಮೀಟರ್ ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಕೆ.ವಸಂತ ಬಂಗೇರ, ಪ್ರಾಂಶುಪಾಲರಾದ ಸುಕೇಶ್ ಕುಮಾರ್, ಉಪ ಪ್ರಾಂಶುಪಾಲರಾದ ಶಮಿವುಲ್ಲಾ, ದೈಹಿಕ ಶಿಕ್ಷಣ ನಿರ್ದೇಶಕರಾದ ರವಿ ರಾಮ್ ಶೆಟ್ಟಿ ಹಾಗೂ ಉಪನ್ಯಾಸಕರು ಅಭಿನಂದಿಸಿದರು.