ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ

0

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಮಡಂತ್ಯಾರು ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಬಹುಮಾನವನ್ನು ಪಡೆದಿರುತ್ತಾರೆ.

ಬಹುಮಾನ ವಿಜೇತರ ವಿವರ : ಕಿರಿಯರ ಪ್ರಾಥಮಿಕ ವಿಭಾಗದಲ್ಲಿ ಪ್ರಾಪ್ತಿ ಶೆಟ್ಟಿ ಲಘುಸಂಗೀತದಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಕಿರಿಯರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸಮರ್ಥ್ ಎ ಸಂಸ್ಕೃತ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಕಿರಿಯರ ಪ್ರಾಥಮಿಕ ವಿಭಾಗದಲ್ಲಿ ಆರುಷ್ ಪಿ ಜೋಶಿ ಸಂಸ್ಕೃತ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ದ್ವಿತೀಯ, ಕಿರಿಯರ ವಿಭಾಗದಲ್ಲಿ ಶ್ರೆಯಸಿ ಹೆಚ್ ಎಸ್ ಅಭಿನಯ ಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ,  ಹಿರಿಯರ ಪ್ರಾಥಮಿಕ ವಿಭಾಗದಲ್ಲಿ ಆರಾಧ್ಯ ಪಿ ಜೋಶಿ ಅಭಿನಯಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಹಂಸಿಕಾ ಕ್ಲೇ ಮಾಡೆಲಿಂಗ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿರುತ್ತಾರೆ.

ಪ್ರೌಢ ಶಾಲಾ ವಿಭಾಗದಲ್ಲಿ ಭರತನಾಟ್ಯ ಸ್ಪರ್ಧೆಯಲ್ಲಿ ಹಂಸಿನಿ ಭಿಡೆ ಪ್ರಥಮ ಸ್ಥಾನ, ಚರ್ಚಾ ಸ್ಪರ್ಧೆಯಲ್ಲಿ ಭಾರ್ಗವಿ ಪ್ರಥಮ ಸ್ಥಾನ, ಅನಾಘಾ ಎಂ ಡಿ, ಅನ್ವಿತಾ ಹೆಬ್ಬಾರ್, ಸಂಜನಾ, ಧೀಮಂತ್, ಆದರ್ಶ ಹಾಗೂ ಹಿತೇಶ್ ಇವನನ್ನೊಳಗೊಂಡ ತಂಡವು ಕಾವ್ವಾಲಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಇಂಗ್ಲೀಷ್ ಭಾಷಣ ಸ್ಪರ್ಧೆಯಲ್ಲಿ ಜೆಸ್ಟೀನ್ ಕೆ ಜೆ ದ್ವಿತೀಯ ಸ್ಥಾನ ಹಾಗೂ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ಸ್ಮೃತಿ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.

LEAVE A REPLY

Please enter your comment!
Please enter your name here