ಪ.ಪೂ ಕಾಲೇಜು ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಬೆಳ್ತಂಗಡಿ: ಪದವಿ ಪೂರ್ವ ಶಿಕ್ಷಣ ಇಲಾಖಾ ವತಿಯಿಂದ ನ.6ರಂದು ಜರುಗಿದ ಶಟಲ್-ಬ್ಯಾಡ್ಮಿಂಟನ್ ಪಂದ್ಯದಲ್ಲಿ ಶ್ರೀ ಗುರುದೇವ ಪ.ಪೂ ಕಾಲೇಜಿನ ವಿದ್ಯಾರ್ಥಿನಿಯರಾದ ಅರ್ಪಿತಾ ದ್ವಿತೀಯ ವಿಜ್ಞಾನ ಮತ್ತು ದೀಕ್ಷಾ ಎಲ್ ದ್ವಿತೀಯ ವಾಣಿಜ್ಯ ಇವರು ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ಶ್ರೀ ಗುರುದೇವ ಟ್ರಸ್ಟ್ ಬೆಳ್ತಂಗಡಿ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಟ್ರಸ್ಟ್‌ನ ಸರ್ವಸದಸ್ಯರು, ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು, ಕಾಲೇಜಿನ ಸಿಬ್ಬಂದಿ ವರ್ಗದವರು ಶ್ಲಾಘಿಸಿದರು.

LEAVE A REPLY

Please enter your comment!
Please enter your name here