ಮಡಂತ್ಯಾರು: “ಅನುಕರಣೆಗಿಂತ ಸೃಜನಶೀಲವಾಗಿ ಯೋಚಿಸುವ ಅಭಿವ್ಯಕ್ತಿ ಮಹತ್ವದ್ದು, ಆದುದರಿಂದ ವಿದ್ಯಾರ್ಥಿಗಳು ದೇಸಿ ಸಂಸ್ಕೃತಿಯ ಬಗೆಗೂ ಒಲವನ್ನು ಬೆಳೆಸಿಕೊಳ್ಳಬೇಕು, ಆ ಮೂಲಕ ಪ್ರಾದೇಶಿಕ ಸಂಸ್ಕೃತಿ, ಕಲೆಯನ್ನು ತಮ್ಮ ಪ್ರತಿಭೆಯ ಪ್ರದರ್ಶನಕ್ಕೆ ಪೂರಕವಾಗಿ ಬಳಸಿಕೊಳ್ಳಬೇಕು” ಎಂಬುದಾಗಿ ಎಸ್.ಎಂ.ಎಸ್ ಕಾಲೇಜು ಬ್ರಹ್ಮಾವರ ಇಲ್ಲಿಯ ಉಪಪ್ರಾಂಶುಪಾಲರಾದ ಡಾ.ವಿದ್ಯಾಲತಾ ಹೇಳಿದರು.
ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ನ.8ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನದ ಉದ್ಘಾಟಕರಾಗಿ ಅವರು ಮಾತನಾಡುತ್ತಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಸಂಚಾಲಕರಾದ ವಂ.ಡಾ.ಸ್ಟಾನಿ ಗೋವಿಯಸ್ ಅವರು ಮಾತನಾಡುತ್ತಾ “ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ವಿದ್ಯಾರ್ಥಿ ಜೀವನದ ಸಾರ್ಥಕತೆಯನ್ನು ಕಂಡುಕೊಳ್ಳಬೇಕು, ಒತ್ತಡಗಳಿಂದ ದೂರಾಗಿ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು” ಎಂಬ ಆಶಯವನ್ನು ವ್ಯಕ್ತಪಡಿಸಿದರು.
ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ ಅಲೆಕ್ಸ್ ಐವನ್ ಸಿಕ್ವೇರಾ ಮತ್ತು ತೀರ್ಪುಗಾರರಾದ ಅಮಿತಾ ಪ್ರಕಾಶ್ ಕ್ರಮಧಾರಿ ಕಾರ್ಯಕ್ರಮಕ್ಕೆ ಶುಭಕೋರಿದರು.
ವೇದಿಕೆಯಲ್ಲಿ ವಿದುಷಿ ವಿನಿತಾ ರಾಜ್ ಕಿಶೋರ್ ಉಪಸ್ಥಿತರಿದ್ದರು.ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಪ್ರೊ.ಪ್ರಕಾಶ್ ಕ್ರಮಧಾರಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.ದೈಹಿಕ ವಿಭಾಗದ ನಿರ್ದೇಶಕರಾದ ಡಾ.ಪ್ರಕಾಶ್ ಡಿ’ಸೋಜಾ ಧನ್ಯವಾದವಿತ್ತರು.ವಿದ್ಯಾರ್ಥಿನಿಯರಾದ ಸೌಂದರ್ಯ ಮತ್ತು ಧನಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ನಡೆಯಿತು.