ಬೆಳ್ತಂಗಡಿ: ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ ಹಾಗೂ ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆಯ ಕುರಿತು ಕಾನೂನು ಅರಿವು ಕಾರ್ಯಕ್ರಮ ನ.9ರಂದು ವಾಣಿ ಪದವಿಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಸಂದೇಶ. ಕೆ ಪ್ರಧಾನ ಸಿವಿಲ್ ನ್ಯಾಯಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ತಾ.ಕಾ.ಸೇ.ಸ. ಬೆಳ್ತಂಗಡಿ ಇವರು ನೆರವೇರಿಸಿಧರು.
ಕಾರ್ಯಕ್ರಮದ ಅಧ್ಯಕ್ಷರಾಗಿ ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಇವರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಧೀಶ ವಿಜಯೇಂದ್ರ ಟಿ.ಹೆಚ್, ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ ಇವರು ವಹಿಸಿದ್ದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯ ವಕೀಲ ಶಿವಕುಮಾರ್ ಎಸ್.ಎಮ್ ರವರು ಭಾಗವಹಿಸಿ ಉಚಿತ ಕಾನೂನು ಸೇವೆಗಳ ದೆಯ್ಯೋದೇಶಗಳ ಬಗ್ಗೆ ಲೋಕ್ ಅದಾಲತ್ ಮತ್ತು ಕಾನೂನು ಅರಿವು ಹಾಗೂ ನೆರವು ಕುರಿತು ಇವುಗಳ ಪ್ರಯೋಜನವನ್ನು ಪಡೆದುಕೊಳ್ಳುವ ಕುರಿತು ಮಾಹಿತಿ ಮತ್ತು ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆಯ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರಾದ ಪುಷ್ಪಲತಾ, ರಾಘವೇಂದ್ರ ರವರು ಉಪಸ್ಥಿತರಿದ್ದರು.