ನ.11: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಪ್ರಶಾಂತ್ ಶೆಟ್ಟಿ ಅವರಿಗೆ ಅಭಿನಂದನಾ ಸಮಾರಂಭ

0

ಉಜಿರೆ: ಶ್ರೀ.ಧ.ಮಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಉಜಿರೆ ಇವರ ಆಶ್ರಯದಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿ ಕರ್ನಾಟಕ ರಾಜ್ಯದ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ 2023 ಪುರಸ್ಕೃತರಾದ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿನ ಪ್ರಾಂಶುಪಾಲ ಡಾ| ಪ್ರಶಾಂತ್ ಶೆಟ್ಟಿ ಇವರಿಗೆ ಅಭಿನಂದನಾ ಸಮಾರಂಭವು ನ.11ರಂದು ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಂತಿವನ ಟ್ರಸ್ಟ್ ನ ಟ್ರಸ್ಟಿಗಳಾಗಿರುವ ಡಿ.ಹರ್ಷೇಂದ್ರ ಕುಮಾರ್ ರವರು ವಹಿಸಲಿದ್ದಾರೆ.ಮುಖ್ಯ ಅತಿಥಿಯಾಗಿ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here