

ವೇಣೂರು: ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳ ತ್ರೈ ಮಾಸಿಕ ಕೆಡಿಪಿ ಸಭೆ ಮತ್ತು ಮಹಿಳಾ ಮತ್ತು ಮಕ್ಕಳ ಇಲಾಖೆಯ ಕಾವಲು ಸಮಿತಿ ಸಭೆ ನ.10ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷ ನೇಮಯ್ಯ ಕುಲಾಲ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ವೇಣೂರು ಮೆಸ್ಕಾಂ ಇಲಾಖೆಯ ಕಿರಿಯ ಅಭಿಯಂತರ ಗಣೇಶ್ ನಾಯ್ಕ, ವೇಣೂರು ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಸುನೀಲ್, ಗ್ರಾಮ ಆಡಳಿತಾಧಿಕಾರಿ ಉಮೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಗುಲಾಬಿ, ವೇಣೂರು ಸರಕಾರಿ ಪ.ಪೂ.ಕಾಲೇಜು ಪ್ರಾಂಶುಪಾಲ ಗಂಗಾಧರ, ಪೊಲೀಸ್ ಇಲಾಖೆಯ ಕೇಶವತಿ, ಆರೋಗ್ಯ ಇಲಾಖೆಯ ಇಂದಿರಾ, ವೇಣೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪುಷ್ಪಾ ಡಿ., ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್, ಕಾರ್ಯದರ್ಶಿ ವನಜ, ಪಂಚಾಯತ್ ಸದಸ್ಯರು, ಪಂಚಾಯತ್ ವ್ಯಾಪ್ತಿಯ ಶಾಲಾ ಮುಖ್ಯ ಶಿಕ್ಷಕರು, 9 ಅಂಗನವಾಡಿ ಕಾರ್ಯಕರ್ತರು, ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.
ಸಿಬ್ಬಂದಿ ನಾರ್ಣಪ್ಪ ಗೌಡ ಸ್ವಾಗತಿಸಿ ವಂದಿಸಿದರು.
ಸಭೆಯಲ್ಲಿ ಗ್ರಾಮ ಪಂಚಾಯತ್ ಆರ್ಥಿಕ ಸಮಸ್ಯೆಯಿಂದಾಗಿ ಗ್ರಾಮೀಣ ಪ್ರದೇಶದ ಪಂಚಾಯತ್ ಗಳ ಕುಡಿಯುವ ನೀರಿನ ವಿದ್ಯುತ್ ಬಿಲ್ ಮನ್ನಾ ಮಾಡುವಂತೆ ಹಾಗೂ ಗ್ರಾಮೀಣ ಪ್ರದೇಶದ ಮಕ್ಕಳ ವಿದ್ಯಾಬ್ಯಾಸ ಕ್ಕೆ ಅನುಕೂಲವಾಗುವಂತೆ ಆದಾಯ ದೃಢಪತ್ರದಲ್ಲಿ ರೂ.1,20,000 ಹೆಚ್ಚಿಸಲು ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ನಿರ್ಣಯಿಸಲಾಯಿತು.