Site icon Suddi Belthangady

ನಡ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

ನಡ: ಬೆಳ್ತಂಗಡಿ ತಾಲೂಕಿನ ನಡ ಗ್ರಾ.ಪಂ ಸಭಾಂಗಣದಲ್ಲಿ 2022-23ನೇ ಸಾಲಿನ 15 ಹಣಕಾಸು ಯೋಜನೆಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ ನಡೆಯಿತು.

ಈ ಸಂದರ್ಭದಲ್ಲಿ ನರೇಗಾ ಯೋಜನೆ ಕುರಿತು ಮಾಹಿತಿ ನೀಡಲಾಯಿತು.

ಸಭೆಯಲ್ಲಿ ಸಭೆಯ ನೋಡಲ್ ಅಧಿಕಾರಿಯಾಗಿ ಪಿ.ಎಸ್.ಜೋಸೆಫ್, ಸಹಾಯಕ ನಿರ್ದೇಶಕರು ಹಿಂ.ವ.ಕಲ್ಯಾಣ ಇಲಾಖೆ ಬೆಳ್ತಂಗಡಿ ಇವರು ಭಾಗವಹಿಸಿದರು.

ಈ ವೇಳೆ ಗ್ರಾ.ಪಂ ಅಧ್ಯಕ್ಷರು ಉಪಾಧ್ಯಕ್ಷರು, ಸರ್ವ ಸದಸ್ಯರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಸಾಮಾಜಿಕ ಲೆಕ್ಕ ಪರಿಶೋಧನಾ ಕಾರ್ಯಕ್ರಮ ವ್ಯವಸ್ಥಾಪಕರು, ತಾಂತ್ರಿತ ಸಹಾಯಕ ಅಭಿಯಂತರರು ಸಿವಿಲ್, ತಾಂತ್ರಿಕ ಸಹಾಯಕ ಅಭಿಯಂತರರು (ಕೃ/ತೋ/ಅ), ತಾಲೂಕು ನರೇಗಾ ಐಇಸಿ ಸಂಯೋಜಕರು, ಉಪ ವಲಯ ಅರಣ್ಯಾಧಿಕಾರಿಗಳು, ಸಾಮಾಜಿಕ ಅರಣ್ಯ ಇಲಾಖೆ ಬೆಳ್ತಂಗಡಿ, ಗ್ರಾ.ಪಂ ಸಿಬ್ಬಂದಿಗಳು, ಸಾಮಾಜಿಕ ಲೆಕ್ಕ ಪರಿಶೋಧನಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version