ಬೆಳ್ತಂಗಡಿ: ನ.09ರಂದು ಬೆಳ್ತಂಗಡಿ ತಾಲೂಕು ಪಂಚಾಯತ್ ಕಛೇರಿಯಲ್ಲಿ ರಾಷ್ಟೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ವಸಹಾಯ ಗುಂಪಿನ ಸದಸ್ಯರು ತಯಾರಿಸಿದ ವಿವಿಧ ವಿನ್ಯಾಸಗಳ ಮಣ್ಣಿನ ಹಣತೆಗಳ ಹಾಗೂ ಹಬ್ಬದ ವಿಶೇಷ ತಿಂಡಿ ತಿನಿಸುಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಪೂರಕವಾಗಿ “ದೀಪ ಸಂಜೀವಿನಿ” ಕಾರ್ಯಕ್ರಮ ಅಯೋಜಿಸಲಾಗಿತ್ತು.
ದೀಪ ಪ್ರಜ್ಚಲನದ ಮೂಲಕ ಕಾರ್ಯಕ್ರಮಕ್ಕೆ ಕಾರ್ಯನಿರ್ವಾಹಕ ಅಧಿಕಾರಿಯವರು ಚಾಲನೆಯನ್ನು ನೀಡಿದರು.ಗ್ರಾಮೀಣ ಭಾಗದ ಸ್ವಸಹಾಯ ಗುಂಪಿನ ಸದಸ್ಯರು ಉತ್ಪಾದಿಸುವ ಮಣ್ಣಿನ ಹಣತೆಗಳಿಗೆ ಹಾಗೂ ಆಹಾರ ಉತ್ಪನ್ನಗಳಿಗೆ ಹೆಚ್ಚಿನ ಪ್ರೋತ್ಸಾಹ ವನ್ನು ನೀಡುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಿರುವುದಾಗಿ ಪ್ರಾಸ್ತಾವಿಕವಾಗಿ ಶಕುಂತಲಾ ಜಿಲ್ಲಾ ವ್ಯವಸ್ಥಾಪಕರು ಮಾತನಾಡಿದರು.
ಗ್ರಾಮೀಣ ಭಾಗದ ಸ್ವಸಹಾಯ ಗುಂಪಿನ ಸದಸ್ಯರು ಉತ್ಪಾದಿಸಿದ ಉತ್ಪನ್ನಗಳ ಮಾರಾಟಕ್ಕೆ ಒಂದು ಉತ್ತಮ ವೇದಿಕೆ ಇದಾಗಿದೆ ಹಾಗೂ ಇನ್ನೂ ಹೆಚ್ಚಿನ ಮಟ್ಟದಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಹೆಚ್ಚಿನ ಸಹಕಾರವನ್ನು ಪಂಚಾಯತ್ ಮುಖಾಂತರ ನೀಡಲಾಗುವುದು ಎಂದು ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ಸ್ವಸಹಾಯ ಗುಂಪಿನ ಸದಸ್ಯರು ತಯಾರಿಸಿದ ಮಣ್ಣಿನ ಹಣತೆಗಳ ಹಾಗೂ ಆಹಾರ ಖಾದ್ಯಗಳ ಮಾರಾಟಕ್ಕೆ ಉತ್ತಮ ರೀತಿಯಲ್ಲಿ ಪ್ರತಿಕ್ರಿಯೆ ದೊರಕಿತು. ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ವ್ಯವಸ್ಥಾಪಕರು, ಲೆಕ್ಕಾಧಿಕಾರಿಗಳು, ಸಹಾಯಕ ನಿರ್ದೇಶಕರು, ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ(ರಿ)ದ ಅಧ್ಯಕ್ಷರು, ಕಾರ್ಯದರ್ಶಿ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು, ತಾಲೂಕು ವ್ಯವಸ್ಥಾಪಕರು(NF), ವಲಯ ಮೇಲ್ವಿಚಾರಕರು, ಬಿಆರ್ ಪಿ-ಇಪಿ, ಮುಖ್ಯ ಪುಸ್ತಕ ಬರಹಗಾರರು, ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು, ತಾಲೂಕು ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.