



ವೇಣೂರು: ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನ.9 ರಂದು ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನದ ಅಂಗವಾಗಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಜರಗಿತು.
ವೇಣೂರು ಪೊಲೀಸ್ ಠಾಣಾಧಿಕಾರಿ ಶ್ರೀಶೈಲ್ ಮುರುಗೊಡು ಹಾಗೂ ಆನಂದ ಯಂ.ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಉಪಯುಕ್ತ ಕಾನೂನು ಮಾಹಿತಿ ನೀಡಿದರು.


ಕಾಲೇಜಿನ ಪ್ರಾಂಶುಪಾಲ ಗಂಗಾಧರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.








