Site icon Suddi Belthangady

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಪ್ರಶಾಂತ್ ಶೆಟ್ಟಿಯವರಿಗೆ ಅಭಿನಂದನಾ ಸಮಾರಂಭ

ಧರ್ಮಸ್ಥಳ: ಶಾಂತಿವನ ಟ್ರಸ್ಟ್ ಧರ್ಮಸ್ಥಳ, ಶ್ರೀ ಧ.ಮ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾ ವಿದ್ಯಾಲಯ ಉಜಿರೆ ಇದರ ಆಶ್ರಯದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಅಪಾರ ಸಾಧನೆಗೆ 2023 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಉಜಿರೆ ಶ್ರೀ ಧ.ಮ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜು ಪ್ರಾಂಶುಪಾಲ ಡಾ.ಪ್ರಶಾಂತ್ ಶೆಟ್ಟಿಯವರಿಗೆ ಅಭಿನಂದನಾ ಸಮಾರಂಭ ನ.11 ರಂದು ಮಹೋತ್ಸವ ಸಭಾ ಭವನದಲ್ಲಿ ಜರಗಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಶಾಂತಿವನ ಟ್ರಸ್ಟ್ ನ ಟ್ರಷ್ಟಿ ಡಿ.ಹರ್ಷೇಂದ್ರ ಕುಮಾರ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಭಾಗವಹಿಸಿದ್ದರು.ಯೋಗ ಮತ್ತು ನೈತಿಕ ಶಿಕ್ಷಣ ನಿರ್ದೇಶಕ ಡಾ.ಶಶಿಕಾಂತ್ ಜೈನ್ ಸನ್ಮಾನ ಪತ್ರ ವಾಚಿಸಿದರು.ಕ್ಷೇತ್ರದ ವಿವಿಧ ವಿಭಾಗದ ಮುಖ್ಯಸ್ಥರು, ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಸೀತಾರಾಮ ತೋಲ್ಪಡಿತ್ತಾಯ, ಶಾಂತಿವನ ಮುಖ್ಯ ವೈದ್ಯಾಧಿಕಾರಿ ಡಾ.ಶಿವಪ್ರಸಾದ್ ಶೆಟ್ಟಿ, ವೈದ್ಯರುಗಳು, ಉಪನ್ಯಾಸಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದರು.

ಡಾ.ಪ್ರಶಾಂತ್ ಶೆಟ್ಟಿ ಮತ್ತು ದೀಪಿಕಾ ಶೆಟ್ಟಿ ದಂಪತಿಯನ್ನು ಸನ್ಮಾನಿಸಿದರು.

Exit mobile version