ಬೆಳ್ತಂಗಡಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರ ಮಹತ್ವಾಕಾಂಕ್ಷೆ ಯೋಜನೆಯಾದ ಉಜ್ವಲ ಗ್ಯಾಸ್ ಯೋಜನೆಯಡಿಯಲ್ಲಿ ಮೇಲಂತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಮತ್ತು ಮುಂಡೂರು ಗ್ರಾಮದ 13 ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸನ್ನು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರು ಶ್ರಮಿಕ ಕಚೇರಿಯಲ್ಲಿ ವಿತರಿಸಿದರು.
ಈ ಸಂದರ್ಭದಲ್ಲಿ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ, ಉಪಾಧ್ಯಕ್ಷರಾದ ಲೋಕನಾಥ್ ಶೆಟ್ಟಿ, ಸದಸ್ಯರಾದ ಸಂತೋಷ್, ಸುಮಲತಾ, ಚಂದ್ರಶೇಖರ್ ಉಪಸ್ಥಿತರಿದ್ದರು.
p>