ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಜಿಲ್ಲಾ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ವಿಜೇತರಾದ ಕಬ್ಸ್ , ಬುಲ್ ಬುಲ್ಸ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳನ್ನು ವಿಧಾನ ಪರಿಷತ್ತು ಸದಸ್ಯ ಕೆ.ಹರೀಶ್ ಕುಮಾರ್ ಗೌರವಿಸಿ ಅಭಿನಂದಿಸಿ ಮಾತನಾಡಿ ಜೀವನದ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜದಲ್ಲಿ ಯಾವ ರೀತಿ ಬದುಕಬೇಕು ಎಂಬುದನ್ನು ಸ್ಕೌಟ್ಸ್ ಗೈಡ್ ನ ಶಿಕ್ಷಣದಿಂದ ಪಡೆಯಬಹುದು.ಸ್ಕೌಟ್ಸ್ ಮತ್ತು ಗೈಡ್ಸ್ ನ ಶಿಕ್ಷಣದಿಂದ ಮಕ್ಕಳಲ್ಲಿ ಆತ್ಮವಿಶ್ವಾಸ, ಹಾಗೂ ನಾಯಕತ್ವ ಗುಣವು ಬೆಳೆಯುತ್ತದೆ ಎಂದು ಮಕ್ಕಳಿಗೆ ತಿಳಿಯಪಡಿಸಿದರು.
ಪೂಜ್ಯ ಹೆಗ್ಗಡೆಯವರ ಶಿಕ್ಷಣ ಸಂಸ್ಥೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವು ಹಾಗೂ ಜೀವನದ ಮೌಲ್ಯಗಳು ದೊರೆಯುವುದು ಈ ಶಿಕ್ಷಣ ಸಂಸ್ಥೆಯ ವಿಶೇಷ ಎಂದು ತಿಳಿಯಪಡಿಸಿದರು.
ವೇದಿಕೆಯಲ್ಲಿ ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಹಾಯಕ ಆಯುಕ್ತರಾದ ಸೋಮಶೇಖರ ಶೆಟ್ಟಿ ಉಪಸ್ಥಿತರಿದ್ದು, ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ವಿಶ್ವದ ಅತ್ಯಂತ ಹಿರಿಯ ಸೇವಾ ಸಂಸ್ಥೆಯಾದ ಭಾರತ್ ಸ್ಕೌಟ್ಸ್ ಗೈಡ್ಸ್ ಗಳಿಂದ ಹಲವಾರು ಸಮಾಜಮುಖಿ ಹಾಗೂ ಮಕ್ಕಳ ಸರ್ವತೋಮುಖ ವ್ಯಕ್ತಿತ್ವವನ್ನು ಸಮಾಜಕ್ಕೆ ಪರಿಚಯಿಸುವಂತಹ ಕಾರ್ಯಗಳು ಈ ಸ್ಕೌಟ್ ಗೈಡ್ಸ್ ಗಳಿಂದ ನಡೆಯುತ್ತಿದೆ.ವಿದ್ಯಾರ್ಥಿಗಳಿಗೆ ಗುರಿ ಎಷ್ಟು ಮುಖ್ಯವೋ, ಅದನ್ನು ತಲುಪುವ ದಾರಿಯೂ ಅಷ್ಟೇ ಮುಖ್ಯ.ಶಿಕ್ಷಣ ಅಂದರೆ ಕೇವಲ ಅಂಕಗಳಿಗೆ ಸೀಮಿತವಾಗದೆ ಸರ್ವತೋಮುಖ ವ್ಯಕ್ತಿತ್ವ ವಿಕಸನ ಆಗಬೇಕು ಎಂದು ತಿಳಿಸಿದರು.
ಶಾಲಾ ಮುಖ್ಯ ಶಿಕ್ಷಕಿ ಹೇಮಲತಾ ಎಂ.ಆರ್.ಉಪಸ್ಥಿತರಿದ್ದರು.ಮಾಸ್ಟರ್ ಮಂಜುನಾಥ ಸಹಕರಿಸಿದರು.ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಸ್ಕೌಟ್ ಮತ್ತು ಗೈಡ್ ಸಂಯೋಜಕ ಶಿಕ್ಷಕಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಪ್ರಮೀಳಾ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ಧನ್ಯವಾದವಿತ್ತರು.