Site icon Suddi Belthangady

ಕಲ್ಲೇರಿ: ಬಟ್ಟೆ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿಯ ಸಮಾರೋಪ ಕಾರ್ಯಕ್ರಮ

ಕಲ್ಲೇರಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ, 10 ದಿನಗಳ ಬಟ್ಟೆ ಕಸೂತಿ ತಯಾರಿಕೆಯ(ಆರಿ ವರ್ಕ್) ತರಬೇತಿಯ ಸಮಾರೋಪ ಕಾರ್ಯಕ್ರಮ ಕಲ್ಲೇರಿ ಹಾಲು ಉತ್ಪಾದಕರ ಸೊಸೈಟಿ ಸಭಾಂಗಣದಲ್ಲಿ ನಡೆಯಿತು.

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ, ಮಂಗಳೂರು ಇಲ್ಲಿಯ ಮುಖ್ಯ ಕಾರ್ಯನಿರ್ವಹನಾಧಿಕಾರಿ ಸಚಿನ್ ಹೆಗ್ಡೆ, ತರಬೇತಿಯಲ್ಲಿ ಭಾಗವಹಿಸಿದ ಮಹಿಳೆಯರಿಗೆ ಸ್ವ ಉದ್ಯೋಗ ಮಾಡಲು ಮಾಹಿತಿ ನೀಡಿದರು.ಬಹಳ ನಾಜುಕಾದ ತರಬೇತಿಯನ್ನು ಉತ್ತಮ ಮಟ್ಟದಲ್ಲಿ ಪಡೆದ ಮಹಿಳೆಯರಿಗೆ ಹುರಿದುಂಬಿಸಿ ಮುಂದೆ ಹೆಚ್ಚಿನ ಕೌಶಲ್ಯ ಪಡೆಯಲು ಪ್ರೇರೇಪಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಬ್ಯಾಂಕ್ ಒಫ್ ಬರೋಡ ಉಪ್ಪಿನಂಗಡಿ ಶಾಖಾ ಪ್ರಬಂಧಕ ವಿಶ್ರುತ್ ಕುಮಾರ್ ಇವರು ಬ್ಯಾಂಕ್ ನಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ತರಬೇತಿ ಪಡೆದ ಮಹಿಳೆಯರು ತರಬೇತಿ ಬಗ್ಗೆ ತಮ್ಮ ಅನಿಸಿಕೆ ತಿಳಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ, ತರಬೇತುದಾರರಾದ ಸುಮನ, ಟೈಲರಿಂಗ್ ತರಬೇತುದಾರರಾದ ಮೀನಾಕ್ಷಿ ಉಪಸ್ಥಿತರಿದ್ದರು.

ಕಲ್ಲೇರಿ ಗ್ರಾಮ ವ್ಯಾಪ್ತಿಯ ಸುತ್ತ ಮುತ್ತ ಊರಿನ ಸುಮಾರು 25 ಮಹಿಳೆಯರು ಈ 10 ದಿವಸದ ತರಬೇತಿ ಪಡೆದು ಪ್ರಮಾಣ ಪತ್ರವನ್ನು ಪಡೆದರು.

Exit mobile version