ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಜೀವನದಲ್ಲಿ ಸವಾಲುಗಳನ್ನು ಎದುರಿಸುವ ಬಗೆ ಹೇಗೆ ಎಂಬ ಕುರಿತು ಸಂವಾದ ಕಾರ್ಯಕ್ರಮ

0

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು, ಇಲ್ಲಿನ ಸಮಾಜಶಾಸ್ತ್ರದ ವಿಭಾಗದ ವತಿಯಿಂದ ನ.11ರಂದು, “ಜೀವನದಲ್ಲಿ ಸವಾಲುಗಳನ್ನು ಎದುರಿಸುವ ಬಗೆ ಹೇಗೆ” ಎಂಬ ಕುರಿತು ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ವಿವೇಕಾನಂದ ಕಾಲೇಜು ಪುತ್ತೂರು ಇಲ್ಲಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿರುವ ಪ್ರೊ.ವಿದ್ಯಾ ಇವರು ಆಗಮಿಸಿದ್ದರು.ಸಂವಾದ ಕಾರ್ಯಕ್ರಮ ದಲ್ಲಿ ಭಾಗವಹಿಸಿದ ಪ್ರೊ.ವಿದ್ಯಾ ರವರು ವಿಧ್ಯಾರ್ಥಿ ಗಳ ಪ್ರಶ್ನೆಗಳಿಗೆ ಸೂಕ್ತ ಉತ್ತರ ಮತ್ತು ಮಾರ್ಗದರ್ಶನವನ್ನು ನೀಡಿ ಪ್ರತಿಯೊಬ್ಬರೂ ತಮ್ಮನ್ನು ತಾವು ಪ್ರೀತಿಸಬೇಕು ಎಂದು ತಿಳಿಸಿದರು.

ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೋ.ಪ್ರಕಾಶ್ ಕ್ರಮಧಾರಿ ಇವರು ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು.

p>

LEAVE A REPLY

Please enter your comment!
Please enter your name here