ಉಜಿರೆ: ರಾಜ್ಯ ಸರಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆಯವರು ದಕ್ಷಿಣ ಕನ್ನಡ ಜಿಲ್ಲೆಗೆ ನಡೆಸಲಿರುವ ಅಧಿಕೃತ ಪ್ರವಾಸದ ಹಿನ್ನೆಲೆಯಲ್ಲಿ, ನ.15 ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತ ಪ್ರಿಯಾಂಕ ಮೇರಿ ಫ್ರಾನ್ಸಿಸ್ 2021-22ನೇ ಸಾಲಿನ ಗಾಂಧಿಗ್ರಾಮ ಪುರಸ್ಕೃತ ಉಜಿರೆ ಗ್ರಾಮ ಪಂಚಾಯತಿಗೆ ಭೇಟಿ ನೀಡಿದರು.
ಉಜಿರೆ ಗ್ರಾಮ ಪಂಚಾಯತಿಯ ವಿಶಿಷ್ಟ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ, ಗ್ರಾಮ ಪಂಚಾಯತ್ ಕಛೇರಿ, ನೂತನವಾಗಿ ನಿರ್ಮಿಸಿರುವ ಕೂಸಿನ ಮನೆ, ಸಂಜೀವಿನಿ ಹಳ್ಳಿ ಸಂತೆ, ಪುಸ್ತಕ ಗೂಡು, ಸ್ವಚ್ಛ ಸಂಕೀರ್ಣ ಘಟಕ, ಪ್ಲಾಸ್ಟಿಕ್ ಮರು ಉತ್ಪಾದನಾ ಘಟಕ ಹಾಗೂ ಮಲತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಗ್ರಾಮ ಪಂಚಾಯತಿಯ ವಿವಿಧ ಘಟಕಗಳ ಕಾರ್ಯನಿರ್ವಹಣೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಉಜಿರೆ ಗ್ರಾಮ ಪಂಚಾಯತಿಯ ಅಮೃತ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ಪದಾಧಿಕಾರಿಗಳು ಹಾಗೂ ಆಕಾಂಕ್ಷ ಟ್ರಸ್ಟ್ ನ ಸ್ವಯಂ ಸೇವಕರೊಂದಿಗೆ ಸಂವಾದವನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಉಜಿರೆ ಗ್ರಾ.ಪಂ.ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಪಂಚಾಯತ್ ಸದಸ್ಯರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ, NRLM ನ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾ, ವಲಯ ಮೇಲ್ವಿಚಾರಕ ಜಯಾನಂದ, ಸ್ವಸ್ತಿಕ್, ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಶೀಲಾವತಿ, ಸಂಜೀವಿನಿ ಒಕ್ಕೂಟದ ಸದಸ್ಯರು, ನರೇಗಾ ಸಹಾಯಕ ನಿರ್ದೇಶಕರು(ಪ್ರಭಾರ )ಸಫನಾ ಐ.ಇ.ಸಿ. ಸಂಯೋಜಕಿ ವಿನಿಷಾ, ನರೇಗಾ ತಾಂತ್ರಿಕ ಸಂಯೋಜಕ ನಿತಿನ್, ಪಿಡಿಒ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ ಶ್ರವಣ್ ಕುಮಾರ್, ಗ್ರಾ.ಪಂ. ಸಿಬ್ಬಂದಿಗಳು ಉಪಸ್ಥಿತರಿದ್ದರು.