Site icon Suddi Belthangady

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಮಕ್ಕಳ ದಿನಾಚರಣೆಯನ್ನು ನ.15 ರಂದು ಆಚರಿಸಲಾಯಿತು.ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದ ಬಳಿಕ ಜವಹರಲಾಲ್ ನೆಹರುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಗೌರವ ಸಮರ್ಪಿಸಲಾಯಿತು.

ಶಾಲಾ ಸಂಚಾಲಕ ಅತೀ.ವಂ.ಫಾ.ವಾಲ್ಟರ್ ಡಿಮೆಲ್ಲೋರವರು ಮಕ್ಕಳ ದಿನಾಚರಣೆಯ ಶುಭಾಶಯವನ್ನು ತಿಳಿಸಿ ಶುಭ ಹಾರೈಸಿದರು.

ಸಹಶಿಕ್ಷಕಿ ಎಲ್ವಿಟಾ ಪಾಯ್ಸ್ ಹಾಗೂ ವಿದ್ಯಾರ್ಥಿ ಜಾನಿಸ್ ಬೆನ್ನಿಸ್ ಮಕ್ಕಳ ದಿನಾಚರಣೆಯ ಕುರಿತು ಮಾತನಾಡಿದರು.ಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆಸಿದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.ಶಿಕ್ಷಕ ವೃಂದದವರು ಶುಭಾಶಯ ಗೀತೆಗಳು ಹಾಗೂ ನೃತ್ಯಗಳ ಮೂಲಕ ಮಕ್ಕಳನ್ನು ರಂಜಿಸಿದರು.

ಶಾಲಾ ಮುಖ್ಯೋಪಾಧ್ಯಾಯರಾದ ವಂ.ಫಾ.ಕ್ಲಿಫರ್ಡ್ ಪಿಂಟೋರವರು ಮಕ್ಕಳ ದಿನಾಚರಣೆಯನ್ನು ವಿನೂತನವಾಗಿ ಆಯೋಜಿಸಿದ ಶಿಕ್ಷಕ ವೃಂದವನ್ನು ಅಭಿನಂದಿಸಿ ಮಕ್ಕಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಕರಕ್ಷಕ ಸಂಘದ ಉಪಾಧ್ಯಕ್ಷೆ ಸುಪ್ರಿಯಾ ಡಿಸೋಜ ಉಪಸ್ಥಿತರಿದ್ದರು.ಸಹ ಶಿಕ್ಷಕಿಯರಾದ ಮೇರಿ ಸುಜಾ ಸ್ವಾಗತಿಸಿ, ಕು.ವಿದ್ಯಾ ವಂದಿಸಿದರು. ಜೊನಿಟಾ ಕೊರೆಯ ಹಾಗೂ ಪ್ರಭಾ ಗೌಡ ಕಾರ್ಯಕ್ರಮ ನಿರ್ವಹಿಸಿದರು.

Exit mobile version