ನ.20: ಮುಂಡಾಜೆಯಲ್ಲಿ 70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ

0

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಗಳು ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳ ಸಹಭಾಗಿತ್ವದಲ್ಲಿ ನಮ್ಮ ಸಂಘ ನಮ್ಮ ಹೆಮ್ಮೆ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ 70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ನ.20ರಂದು ಚಾರ್ಮಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಭಾಭವನದ ದಿ. ಎನ್.ಎಸ್. ಗೋಖಲೆ ಮುಂಡಾಜೆ ವೇದಿಕೆಯಲ್ಲಿ ನಡೆಯಲಿದೆ.

ಸಹಕಾರಿ ಶಿಕ್ಷಣ ತರಬೇತಿಯ ಪರಿಷ್ಕರಣೆ ವಿಷಯದಡಿ, 5 ಟ್ರಲಿಯನ್ ಡಾಲರ್ ಆರ್ಥಿಕತೆ ಸಾಧನೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳು ಧೈಯದೊಂದಿಗೆ ಕಾರ್ಯಕ್ರಮ ಜರಗಲಿದೆ.

ಸಭಾ ಕಾರ್ಯಕ್ರಮವನ್ನು ಕ್ಯಾಂಪ್ಕೋ ಉಪಾಧ್ಯಕ್ಷ ಶಂಕರ ನಾರಾಯಣ ಭಟ್ ಖಂಡಿಗೆ ಉದ್ಘಾಟಿಸಲಿದ್ದಾರೆ. ಮುಂಡಾಜೆ ಪ್ಯಾಕ್ಸ್ ಅಧ್ಯಕ್ಷ ನೂಜಿ ಜನಾರ್ದನ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರುಗಳಾದ ಹರೀಶ್ ಕುಮಾರ್, ಪ್ರತಾಪ್‌ಸಿಂಹ ನಾಯಕ್, ಮಂಗಳೂರು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರುಗಳಾದ ನಿರಂಜನ್ ಬಿ, ಶಶಿಕುಮಾರ್ ರೈ ಬಾಲೊಟ್ಟು, ದ.ಕ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಪದ್ಮನಾಭ ಅರ್ಕಜೆ, ಮಂಗಳೂರು ಸಹಕಾರಿ ಸಂಘಗಳ ಉಪನಿಬಂಧಕ ಹೆಚ್.ಎನ್ ರಮೇಶ್, ಉಜಿರೆ ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ ಜಿ. ಭಿಡೆ, ಬೆಳ್ತಂಗಡಿ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸೋಮನಾಥ ಬಂಗೇರ, ಚಾರ್ಮಾಡಿ ಗ್ರಾ.ಪಂ. ಅಧ್ಯಕ್ಷೆ ಶಾರದ, ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಕೇಶವ ಜಿ., ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕಿ ತ್ರಿವೇಣಿ ರಾವ್, ಬೆಳ್ತಂಗಡಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಬಿ.ವಿ ಪ್ರತಿಮಾ ಭಾಗವಹಿಸಲಿದ್ದಾರೆ.ನಿವೃತ್ತ ಯೋಧ ಕರ್ನಲ್ ನಿತಿನ್ ಭಿಡೆ ಮುಂಡಾಜೆ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಕ ಚಾರ್ಮಾಡಿ ಹಸನಬ್ಬನವರಿಗೆ ಅಭಿನಂದನೆ ಕಾರ್ಯಕ್ರಮ ನಡೆಯಲಿದೆ ಎಂದು ಮುಂಡಾಜೆ ಸಿ.ಎ. ಬ್ಯಾಂಕ್ ಉಪಾಧ್ಯಕ್ಷ ಕೆ. ಪ್ರಕಾಶ ನಾರಾಯಣ ಹಾಗೂ ಸಿಇಓ ಎಂ. ಚಂದ್ರಕಾಂತ ಪ್ರಭು ತಿಳಿಸಿದ್ದಾರೆ.

p>

LEAVE A REPLY

Please enter your comment!
Please enter your name here