Site icon Suddi Belthangady

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು ನಿಟ್ಟಡೆಯಲ್ಲಿ ಮಕ್ಕಳ ದಿನಾಚರಣೆಯನ್ನು ನ.15ರಂದು ನಡೆಸಲಾಯಿತು.

ಮಕ್ಕಳಿಗೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು, ವಿಜೇತ ಮಕ್ಕಳಿಗೆ ಸಂಸ್ಥಾಪಕ ಗಿರೀಶ್ ಕೆಎಚ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಿತ್ ಕುಲಾಲ್ ಬಹುಮಾನವನ್ನು ವಿತರಿಸಿದರು.

ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಉಷಾ ಜಿ, ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಅಕ್ಷತಾ, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪವಿತ್ರ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶೋಭಾ ಎಲ್ ಎನ್ ರಾವ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.ಹಾಗು ಮಕ್ಕಳಿಗೆ ಸಿಹಿ ತಿಂಡಿಯನ್ನು ವಿತರಿಸಲಾಯಿತು.

Exit mobile version