Site icon Suddi Belthangady

ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಚಾಚಾ ನೆಹರುರವರ ಜನ್ಮ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ಬಳಿಕ ಸಭಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಶಾಲಾ ಮುಖ್ಯ ಶಿಕ್ಷಕಿ ಶೋಭಿತ ಕೆ ಆರ್ ಹಾಗೂ ಶಾಲಾ ಮುಖ್ಯಮಂತ್ರಿ ಅನೂಜ್ಞಾ, ಉಪಮುಖ್ಯಮಂತ್ರಿ ಸೃಜನ್ ಪ್ರಸಾದ ಜೊತೆಯಾಗಿ ಚಾಲನೆ ನೀಡಿದರು.

ಮಕ್ಕಳ ದಿನಾಚರಣೆ ಅಂಗವಾಗಿ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳ ಸಾಂಸೃತಿಕ ಕಾರ್ಯಕ್ರಮಗಳು ಜರುಗಿದವು.ಸಭಾ ಕಾರ್ಯಕ್ರಮದಲ್ಲಿ ಸ್ಪರ್ಧೆಯಲ್ಲಿ ವಿಜೇತರಾದ ವಿಧ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಸಹ ಶಿಕ್ಷಕಿ ಪವಿತ್ರ ಎಲ್ಲರನ್ನೂ ಸ್ವಾಗತಿಸಿದರು, ಸಹ ಶಿಕ್ಷಕಿ ರಕ್ಷಿತಾ ಧನ್ಯವಾದ ಅರ್ಪಿಸಿದರು ಹಾಗೂ ಸಹ ಶಿಕ್ಷಕಿ ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು.

Exit mobile version