Site icon Suddi Belthangady

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು ನಿಟ್ಟಡೆ ಇಲ್ಲಿ ಮಕ್ಕಳ ದಿನಾಚರಣೆಯನ್ನು ನ.15ರಂದು ನಡೆಸಲಾಯಿತು.

ಬಹಳ ಸ್ಪರ್ಧೆಗಳನ್ನು ಏರ್ಪಡಿಸಿದ್ದು, ವಿಜೇತರಿಗೆ ನಮ್ಮ ಸಂಸ್ಥಾಪಕರಾದ ಗಿರೀಶ್ ಕೆಎಚ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಅಶ್ವಿತ್ ಕುಲಾಲ್ ಬಹುಮಾನವನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಉಷಾ ಜಿ, ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಅಕ್ಷತಾ, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪವಿತ್ರ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶೋಭಾ ಎಲ್.ಎನ್ ರಾವ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.ಕೊನೆಯದಾಗಿ ಮಕ್ಕಳಿಗೆ ಸಿಹಿ ತಿಂಡಿಯನ್ನು ವಿತರಿಸಲಾಯಿತು.

Exit mobile version