ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಮತ್ತು ದೀಪಾವಳಿ ಆಚರಣೆ

0

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ನವೆಂಬರ್ 15ರಂದು ಮಕ್ಕಳ ದಿನಾಚರಣೆ ಮತ್ತು ದೀಪಾವಳಿಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಮಕ್ಕಳು ಕಿರುನಾಟಕ ಪ್ರದರ್ಶಿಸುವ ಮೂಲಕ ದೀಪಾವಳಿಯ ಮಹತ್ವವನ್ನು ವಿವರಿಸಿದರು.

ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಡು, ನೃತ್ಯ, ನಾಟಕದ ಮೂಲಕ ಮಕ್ಕಳನ್ನು ಮನರಂಜಿಸಿದರು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಡಂತ್ಯಾರು ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಜೆರಾಲ್ಡ್ ಮೊರಸ್ ರವರು ಆಗಮಿಸಿದ್ದರು. ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ಅಜ್ಞಾನದಿಂದ ಜ್ಞಾನದೆಡೆಗೆ ಕತ್ತಲೆಯಿಂದ ಬೆಳಕಿನೆಡೆಗೆ ನಮ್ಮ ಜೀವನವು ಸಾಗಬೇಕೆಂದು ಎಂದು ಹೇಳಿ ಮಕ್ಕಳಿಗೆ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೊ ಡೇಸರವರು, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ವಿನಯ್ ಜಾನ್ಸನ್ ಡಿಸೋಜರವರು, ಶಾಲಾ ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಕರ-ರಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶಿಕ್ಷಕಿಯರಾದ ಆಶಾಲತಾರವರು ನಿರೂಪಿಸಿ, ಟ್ರೆಸ್ಸಿ ಲೋಬೊರವರು ಸ್ವಾಗತಿಸಿ, ವಿದ್ಯಾರ್ಥಿನಿಯಾದ ಪ್ರಿನ್ಸಿಯ ಕಾರ್ಲ್ ರವರು ಧನ್ಯವಾದವನ್ನು ಸಮರ್ಪಿಸಿದರು.

LEAVE A REPLY

Please enter your comment!
Please enter your name here