Site icon Suddi Belthangady

ಉದ್ಯಮಿ ಅಶ್ವಥ್ ಹೆಗ್ಡೆ ವಿರುದ್ಧ ಸುಳ್ಳು ಸುದ್ದಿ ಪ್ರಸಾರಕ್ಕೆ ತಡೆಯಾಜ್ಞೆ

ಬೆಳ್ತಂಗಡಿ: ಉದ್ಯಮಿ ಅಶ್ವಥ್ ಹೆಗ್ಡೆ ಅವರ ವಿರುದ್ಧ ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ, ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಅಶ್ವಥ್ ಹೆಗ್ಡೆ ವಿರುದ್ಧ ಅನೇಕ ದಿನಗಳಿಂದ ಆಧಾರ ರಹಿತ ಆರೋಪಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿತ್ತು.ಈ ಆರೋಪಗಳ ವಿರುದ್ಧ ಹೈಕೋರ್ಟ್ ವಿಚಾರಣೆ ನಡೆಸಿ ತಡೆಯಾಜ್ಞೆ ನೀಡಿದ್ದರೂ, ಕೆಲವರು ವೈಯಕ್ತಿಕ ಹಿತಾಸಕ್ತಿಯಿಂದ ಅಶ್ವಥ್ ಹೆಗ್ಡೆ ಮತ್ತು ಅವರ ಸಂಸ್ಥೆ ಎನ್ವಿಗ್ರೀನ್ ಬಯೋಟೆಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವಿರುದ್ಧ ಆಕ್ಷೇಪಾರ್ಹ ಪದಗಳಲ್ಲಿ ಉದ್ದೇಶಪೂರ್ವಕವಾಗಿ ಸುಳ್ಳು ಸುದ್ದಿಗಳನ್ನು ವರದಿ ಮಾಡುತ್ತಿದ್ದರು. ಸುಳ್ಳು ವರದಿಗಳ ವಿರುದ್ಧ ಅಶ್ವಥ್ ಹೆಗ್ಡೆ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣ, ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ನಿರ್ಬಂಧಿಸಿದೆ.

ಅಶ್ವಥ್ ಹೆಗ್ಡೆಯವರ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್, ಪ್ರಕಾಶ್ ಶರ್ಮ ವಾದಿಸಿದ್ದರು. ಸುಯೋಗ್ ಹೇರಳೆ ವಕಾಲತ್ ವಹಿಸಿದ್ದರು. ಆಧಾರರಹಿತವಾಗಿ ಸುಳ್ಳು ಸುದ್ದಿ ಹಬ್ಬಿಸಿ ಮಾನಹಾನಿ ಮಾಡಿ ಮಾನಸಿಕ ಹಿಂಸೆ ನೀಡಿರುವವರ ವಿರುದ್ಧ 10 ಕೋಟಿ ರೂ. ಪರಿಹಾರ ಆಗ್ರಹಿಸಿ ಕ್ರಿಮಿನಲ್ ಮಾನಹಾನಿ ಮೊಕದ್ದಮೆ ಹೂಡುವುದಾಗಿ ಅಶ್ವಥ್ ಹೆಗ್ಡೆ ತಿಳಿಸಿದ್ದಾರೆ.

Exit mobile version