


ಬೆಳ್ತಂಗಡಿ: ಕರ್ನಾಟಕ ಪ್ರಾಂತೀಯ ಸಮಾಜ ಸೇವಾ ಸಂಸ್ಥೆ ಬೆಂಗಳೂರು ಮತ್ತು ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಕ್ಲಸ್ಟರ್ ಮಟ್ಟದ ಸಾವಿಂಧಾನಿಕ ಹಕ್ಕುಗಳ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ನ.16 ಹಾಗೂ 17ರಂದು ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆಗ್ನೆಸ್ ಚಾಕೊ ಇವರು ನೆರವೇರಿಸಿ ಶುಭ ಹಾರೈಸಿದರು.ಅಥಿತಿಗಳಾಗಿ ಕ್ರಾಸ್ ಸಂಸ್ಥೆಯ ರಾಜ್ಯ ಸಂಯೋಜಕಿ ಸಿಸ್ಟರ್ ನ್ಯಾನ್ಸಿ ಲೋಬೊ ಹಾಗೂ ವಂದನೀಯ ಫಾದರ್ ತೋಮಸ್ ಪುಲ್ಲಾಟ್ ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಸಂಪನ್ಮೂಲ ವ್ಯಕ್ತಿಯಾಗಿ ವಂದನೀಯ ಫಾದರ್ ಡಾl ಸಲೀನ್ ಜೋಸೆಫ್ ರವರು ಸಾಂವಿಧಾನಿಕ ಹಕ್ಕುಗಳ ಬಗ್ಗೆ ತರಬೇತಿ ನೀಡಿದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾದರ್ ಬಿನೋಯಿ ಎ.ಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕರ್ತರಾದ ಮಾರ್ಕ್ ಡಿ ಸೋಜರವರು ಎಲ್ಲರನ್ನು ಸ್ವಾಗತಿಸಿದರು.ಸುಶೀಲಾ ರವರು ವಂದಿಸಿದರು.ಯೋಜನಾ ಸಂಯೋಜಕಿ ಸಿಸಿಲ್ಯಾ ತಾವ್ರೋರವರು ಕಾರ್ಯಕ್ರಮ ನಿರೂಪಿಸಿದರು.ಡಿ.ಕೆ.ಆರ್.ಡಿ.ಎಸ್, ಸಿ.ಒ.ಡಿ.ಪಿ, ಕಿಡ್ಸ್ ಹಾಗೂ ಸಂಪದ ಸಂಸ್ಥೆಯ ಸಂಯೋಜಕರು, ಕಾರ್ಯಕರ್ತರು ಹಾಗೂ ಒಕ್ಕೂಟದ ಪ್ರತಿನಿಧಿಗಳು ಸೇರಿದಂತೆ 44 ಮಂದಿ ಭಾಗಹಿಸಿದ್ದರು.