Site icon Suddi Belthangady

ಬೆಳ್ತಂಗಡಿ ಸ.ಪ್ರ.ದ.ಕಾಲೇಜಿನಲ್ಲಿ ರೋವರ್ ರೇಂಜರ್, ಯುವ ರೆಡ್ ಕ್ರಾಸ್ ಘಟಕದ ಚಟುವಟಿಕೆಗಳ ಉದ್ಘಾಟನೆ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ನ.18ರಂದು 2023-24ನೇ ಸಾಲಿನ ರೋವರ್ ರೇಂಜರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಚಟುವಟಿಕೆಗಳನ್ನು ಪುತ್ತೂರಿನ ವಿವೇಕಾನಂದ ಕಾಲೇಜಿನ ರೇಂಜರ್ ಲೀಡರ್ ದೀಪಿಕಾ ಎಸ್ ಇವರು ಉದ್ಘಾಟಿಸಿದರು.

ನಂತರ ಯುವ ರೆಡ್ ಕ್ರಾಸ್ ಘಟಕ ಹಾಗೂ ರೋವರ್ ರೇಂಜರ್ ಘಟಕಗಳ ಉದ್ದೇಶ ಮತ್ತು ಅದರಲ್ಲಿ ವಿದ್ಯಾರ್ಥಿಗಳ ಪಾತ್ರ ಏನು ಎಂಬುದನ್ನು ಸವಿವರವಾಗಿ ತಿಳಿಸಿದರು.ಈ ಘಟಕಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಸಂಸ್ಕಾರ ಸಾಮಾಜಿಕ ಕಳಕಳಿ ಹಾಗೂ ರಾಷ್ಟ್ರಕ್ಕೆ ಪೂರಕವಾಗಿ ನಡೆದುಕೊಳ್ಳುವ ವ್ಯಕ್ತಿತ್ವವನ್ನು ಬೆಳೆಸುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರಾಘವ ಎನ್ ಇವರು ವಹಿಸಿದ್ದರು.ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿಗಳಾದ ಡಾ.ಸುಬ್ರಹ್ಮಣ್ಯ ಕೆ ಇವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಐಕ್ಯೂ ಎಸಿ ಸಂಚಾಲಕರಾದ ಡಾ.ಕುಶಾಲಪ್ಪ, ರೋವರ್ ಸ್ಕೌಟ್ ಲೀಡರ್ ಡಾಕ್ಟರ್ ರವಿ ಎಮ್ ಏನ್ ಮತ್ತು ರೇಂಜರ್ ಲೀಡರ್ ಪ್ರೊಫೆಸರ್ ರಾಜೇಶ್ವರಿ ಉಪಸ್ಥಿತರಿದ್ದರು.ದ್ವಿತೀಯ ಬಿಕಾಂನ ಭವ್ಯ ಕಾರ್ಯಕ್ರಮವನ್ನು ನಿರೂಪಿಸಿದರು.ಪ್ರಥಮ ಬಿಕಾಂನ ರಕ್ಷಿತಾ ಸ್ವಾಗತಿಸಿ, ಪ್ರಥಮ ಬಿಬಿಎ ವೀಕ್ಷಿತ ಧನ್ಯವಾದ ಅರ್ಪಿಸಿದರು.

Exit mobile version