ತಾಲೂಕು ಮಟ್ಟದ ಪ್ರತಿಭಾ ಕಾರಂಜಿ- ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಲಾಯಿಲ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇಲ್ಲಿಯ ವಿದ್ಯಾರ್ಥಿಗಳು ಮಡಂತ್ಯಾರ್, ಸೇಕ್ರೆಡ್ ಹಾರ್ಟ್ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿ ವಿವಿಧ ಬಹುಮಾನವನ್ನು ಪಡೆದಿರುತ್ತಾರೆ.

ಹಿರಿಯ ಪ್ರಾಥಮಿಕ ವಿಭಾಗದ ಹಿಂದಿ ಕಂಠಪಾಠ ಸ್ಪರ್ಧೆಯಲ್ಲಿ 7ನೇ ತರಗತಿಯ ಶ್ರೇಯಾ ರೋಸ್ಲಿನ್ ಹಾಗೂ ಆಶುಭಾಷಣ ಸ್ಪರ್ಧೆಯಲ್ಲಿ 7ನೇ ತರಗತಿಯ ಸುಮೇಧ ಕೃಷ್ಣ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಪ್ರೌಢಶಾಲಾ ವಿಭಾಗದ ಸಂಸ್ಕೃತ ಧಾರ್ಮಿಕ ಪಠಣದಲ್ಲಿ 9ನೇ ತರಗತಿಯ ತನ್ವಿ ಭಟ್ ಹಾಗೂ ಗಜಲ್ ನಲ್ಲಿ 9ನೇ ತರಗತಿಯ ವೈಷ್ಣವಿ ಭಟ್ ಪ್ರಥಮ ಸ್ಥಾನವನ್ನು ಪಡೆದು ಡಿ.1ರಂದು ರಾಮಕೃಷ್ಣ ಶಾಲೆ, ಮಂಗಳೂರು ಇಲ್ಲಿ ನಡೆಯುವ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here