ಸೈಂಟ್ ಪೀಟರ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಮತ್ತು ದೀಪಾವಳಿ ಆಚರಣೆ

0

ಅಳದಂಗಡಿ: ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆ ಅಳದಂಗಡಿಯಲ್ಲಿ ಮಕ್ಕಳ ದಿನಾಚರಣೆ ಮತ್ತು ದೀಪಾವಳಿ ಹಬ್ಬವನ್ನು ಆಚರಿಸಲಾಯಿತು.

ವೇದಿಕೆಯಲ್ಲಿ ಶಾಲಾ ಸಂಚಾಲಕರಾದ ವಂ.ಫಾ.ಎಲಿಯಾಸ್ ಡಿಸೋಜ, ಮುಖ್ಯ ಶಿಕ್ಷಕಿ ಸಿ.ಶೀಬಾ ಜೋಸೆಫ್, ಶಾಲಾ ವಿದ್ಯಾರ್ಥಿ ನಾಯಕಿ ಕು.ಲಿಯಾನ ಪೈಸ್ ಉಪಸ್ಥಿತರಿದ್ದರು .

ಶಿಕ್ಷಕ ವೃಂದದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವನ್ನು ವಿತರಿಸಲಾಯಿತು. ಹಾಗೂ ವಿದ್ಯಾರ್ಥಿಗಳು ರೂಪಕದ ಮೂಲಕ ದೀಪಾವಳಿ ಹಬ್ಬದ ಮಹತ್ವವನ್ನು ವ್ಯಕ್ತಪಡಿಸಿದರು.

ಶಾಲಾ ಸಂಚಾಲಕರಾದ ಗೌರವಾನ್ವಿತ ವಂ.ಫಾ ಎಲಿಯಾಸ್ ಡಿಸೋಜ ರವರು ಮಾತನಾಡಿ ಶುಭಹಾರೈಸಿದರು.ಅನಿತಾ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ನಿರ್ಮಲ ಸ್ವಾಗತಿಸಿ 10 ನೇ ತರಗತಿಯ ವಿದ್ಯಾರ್ಥಿನಿಯಾದ ಸಮೀಕ್ಷಾ ವಂದಿಸಿದರು.

LEAVE A REPLY

Please enter your comment!
Please enter your name here