ಬೆಳಾಲು ಪ್ರೌಢ ಶಾಲೆಯಲ್ಲಿ ಅಣಬೆ ಬೇಸಾಯ ತರಬೇತಿ

0

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶದ ಸಂದರ್ಭದಲ್ಲಿ ಅಣಬೆ ಕೃಷಿ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಜರಗಿತು.

ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶೇಖರ್ ಕೊಲ್ಲಿಮಾರು ರವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಬೆಳಾಲು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನಿರ್ದೇಶಕ ಸುಲೈಮಾನ್ ಭೀಮಂಡೆಯವರು ಆಗಮಿಸಿದ್ದು, ಅಣಬೆ ಕೃಷಿಯ ಮಾಹಿತಿಯೊಂದಿಗೆ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು.ಅತ್ಯಂತ ಸುಲಭ ಮತ್ತು ಕಡಿಮೆ ವೆಚ್ಚದಲ್ಲಿ, ಮನೆ ಬಳಕೆ ಹಾಗೂ ಆರ್ಥಿಕ ದೃಷ್ಟಿಕೋನದಿಂದಲೂ ಮಾಡಬಹುದಾದ ಕೃಷಿಯೆಂದರೆ ಅಣಬೆ ಬೇಸಾಯ ಮಾತ್ರ ಎನ್ನುತ್ತಾ ಮಾಹಿತಿ ನೀಡಿದರು.

ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಬಹಳಷ್ಟು ಮಂದಿ ಪೋಷಕರು ತರಬೇತಿಯಲ್ಲಿ ಪಾಲ್ಗೊಂಡಿದ್ದರು.ಶಿಕ್ಷಕ ಶಿಕ್ಷಕ ಗಣೇಶ್ವರ ಸ್ವಾಗತಿಸಿ, ಕೋಕಿಲಾರವರು ವಂದಿಸಿದರು, ಸುಮನ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here