ನಾರಾವಿ ಕಾಲೇಜಿನಲ್ಲಿ ದೀಪಾವಳಿ ಆಚರಣೆ ಮತ್ತು ಮಕ್ಕಳ ದಿನಾಚರಣೆ

0

ನಾರಾವಿ: ಸಂತ ಅಂತೋನಿ ಪದವಿ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ, ಪದವಿಪೂರ್ವ ಕಾಲೇಜು ನಾರಾವಿ ವತಿಯಿಂದ ದೀಪಾವಳಿ ಆಚರಣೆ ಹಾಗೂ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಬಳಂಜ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರು ಹಾಗೂ ಹವ್ಯಾಸಿ ಪತ್ರಕರ್ತ ಸದಾನಂದ ಸಾಲ್ಯಾನ್ ಇವರು ಹಣತೆ ಹಚ್ಚಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಂ| ಡಾ.ಆಲ್ವಿನ್ ಸೆರಾವೊ ವಹಿಸಿದ್ದರು.ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ರಿಚರ್ಡ್ ಮೋರಸ್ ಮಕ್ಕಳ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ದಿನೇಶ್ ಬಿ ಕೆ ಬಳoಜ ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನ ಸ್ವಾಗತಿಸಿದರು.

ವೇದಿಕೆಯಲ್ಲಿ ಪದವಿ ಕಾಲೇಜಿನ ಉಪಪ್ರಾಂಶುಪಾಲ ಸಂತೋಷ್ ಸಲ್ಡಾನ, ಆಂಗ್ಲ ಭಾಷಾ ಉಪನ್ಯಾಸಕಿ ಶಿಜಿ ಹಾಗೂ ಕಾಲೇಜಿನ ವಿದ್ಯಾರ್ಥಿ ಸಂಘದ ನಾಯಕರು ಉಪಸಿತರಿದ್ದರು.ಕು.ರಶ್ಮಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here