Site icon Suddi Belthangady

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಗಳಿಗೆ ತರಬೇತಿ ಕಾರ್ಯಕ್ರಮ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಇಲ್ಲಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ನ.18 ರಂದು ಉಳಿವಿಗಾಗಿ ಕೌಶಲ್ಯಗಳು ಗಂಟು ಹಾಕುವುದು, ಮ್ಯಾಪಿಂಗ್ ಮತ್ತು ಪ್ರಥಮ ಚಿಕಿತ್ಸೆ’ ಎಂಬ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಅಲೆಕ್ಸ್ ಐವನ್ ಸಿಕ್ವೆರಾ ಇವರು ವಹಿಸಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಕೂಡ ಸಕ್ರಿಯವಾಗಿ ತೊಡಗಿಸಿಕೊಂಡು ಅದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರೇರೇಪಿಸಿದರು.

ಈ ಕಾರ್ಯಕ್ರಮಕ್ಕೆ ತರಬೇತುದಾರರಾಗಿ ಆಗಮಿಸಿದ ಜಿಲ್ಲಾ ಸಂಘಟನಾ ಆಯುಕ್ತರು ಹಾಗೂ ನಿವೃತ್ತ ಶಿಕ್ಷಕರಾದ ಶಾಂತರಾಮ ಪ್ರಭು ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ಮುಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಾವ ರೀತಿ ರೋವರ್ಸ್ ಮತ್ತು ರೆಂಜರ್ಸ್ ಘಟಕವನ್ನು ಬಳಸಿಕೊಳ್ಳಬೇಕು ಮತ್ತು ಆತ್ಮಸ್ಥೈರ್ಯವನ್ನು ಯಾವ ರೀತಿ ಬೆಳೆಸಿಕೊಳ್ಳಬೇಕು ಎಂದು ಮನವರಿಕೆ ಮಾಡಿದರು.

ವಿದ್ಯಾರ್ಥಿಗಳಿಗೆ ಗಂಟು ಹಾಕುವಿಕೆಯ ತಂತ್ರಗಳು, ಮ್ಯಾಪಿಂಗ್ ಮತ್ತು ಪ್ರಥಮ ಚಿಕಿತ್ಸೆಗಳ ಕುರಿತಾದ ತರಬೇತಿಯನ್ನು ನೀಡಿ, ತುರ್ತು ಸಂದರ್ಭಗಳಲ್ಲಿ ಅವುಗಳ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರೋವರ್ ಸ್ಕೌಟ್ ಲೀಡರ್ ಶ್ರೀನಾಥ್ ಬಿ ಎಸ್ ಅತಿಥಿಗಳಿಗೆ ಸ್ವಾಗತಿಸಿ, ವಾಣಿಜ್ಯ ವಿಭಾಗದ ಉಪನ್ಯಾಸಕಿ ರೇಂಜರ್ ಲೀಡರ್ ಪ್ರೀತಿ  ಡಿ’ಸೋಜಾ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Exit mobile version