ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ವಿತರಣೆ

0

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಶ್ರೀ ಕೃಷ್ಣ ಸ್ವ-ಸಹಾಯ ಸಂಘದ ಸೇಸಪ್ಪ ದೇವಾಡಿಗರವರಿಗೆ ಕಾಲಿನ ಹಾಗೂ ಹೃದಯ ಸಂಬಂಧಿ ಕಾಯಿಲೆಯ ಚಿಕಿತ್ಸೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವಿಶೇಷವಾಗಿ ಖಾವಂದರು ಮಂಜೂರು ಮಾಡಿರುವ ರೂ 25,000 ಮೊತ್ತದ ಮಂಜೂರಾತಿ ಪತ್ರ ಹಾಗೂ ಚೆಕ್ಕನ್ನು ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡುವೆಟ್ನಯರು ವಿತರಿಸಿದರು.

ಈ ಸಂದರ್ಭ ತಾಲೂಕು ಯೋಜನಾಧಿಕಾರಿ ಸುರೇಂದ್ರ, ರತ್ನಮಾನಸದ ಪ್ರಬಂಧಕ ಯತೀಶ್, ಜನಜಾಗ್ರತಿ ಪ್ರಾದೇಶಿಕ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ, ಮೇಲ್ವಿಚಾರಕಿ ವನಿತ ಹಾಗೂ ಸೇವಾ ಪ್ರತಿನಿಧಿ ಪ್ರೇಮಾರವರು ಉಪಸ್ಥಿತರಿದ್ದರು.

p>

LEAVE A REPLY

Please enter your comment!
Please enter your name here