ಬೆಳ್ತಂಗಡಿ: ತಾಲೂಕು ಮರಾಟಿ ಸಮಾಜ ಸೇವಾ ಸಂಘ ವತಿಯಿಂದ ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾಟ ನ.17ರಂದು ಬೆಳ್ತಂಗಡಿ ಜೂನಿಯರ್ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.
ಸಂಘದ ಗೌರವ ಸಲಹೆಗಾರ ಸಂತೋಷ್ ಕುಮಾರ್ ಲಾಯಿಲ ಪಂದ್ಯಾಟವನ್ನು ಉದ್ಘಾಟಸಿ ಮಾತನಾಡಿ ನಾಲ್ಕು ವರ್ಷಗಳ ಹಿಂದೆ ತಾಲೂಕಿನಲ್ಲಿ ಕ್ರೀಡಾಕೂಟ ನಡೆಸಿ ಮರಾಟಿ ಸಮಾಜ ಸೇವಾ ಸಂಘ ಯಶಸ್ವಿಯಾಗಿತ್ತು.ಮತ್ತೊಮ್ಮೆ ತಾಲೂಕಿನಲ್ಲಿ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ.ಈ ಬಾರಿಯೂ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಭಾಗವಹಿಸಿ ಈ ಕ್ರೀಡಾಕೂಟಗಳು ಯಶಸ್ವಿಯಾಗಲಿ ಎಂದು ಶುಭಹಾರೈಸಿದರು.
ಸಂಘದ ಅಧ್ಯಕ್ಷ ಉಮೇಶ್ ನಾಯ್ಕ ಕೇಲ್ದಡ್ಕ ಶುಭಹಾರೈಸಿದರು.ಪಂದ್ಯಾಟದಲ್ಲಿ ಒಟ್ಟು 13 ತಂಡಗಳು ಭಾಗವಹಿಸಿಯಿತು.ಕ್ರಿಕೆಟ್ ಪಂದ್ಯಾಟದ ಪ್ರಥಮ ಸ್ಥಾನವನ್ನು ಮಹಾಮ್ಮಾಯಿ ಬಡಕೋಡಿ ತಂಡ ಹಾಗೂ ದ್ವಿತೀಯ ಸ್ಥಾನವನ್ನು ಮಾಚಾರ್ ಪ್ರೆಂಡ್ಸ್ ತಂಡವು ಪಡೆಯಿತು.ಕ್ರೀಡಾ ಕಾರ್ಯದರ್ಶಿ ರವಿಕುಮಾರ್ ಬಡಕೋಡಿ ಕಾರ್ಯಕ್ರಮ ನಿರ್ವಹಿಸಿದರು. ಸಂಘದ ಪದಾಧಿಕಾರಿಗಳು ಸಹಕರಿಸಿದರು.