Site icon Suddi Belthangady

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನ.15ರಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಯ ಲಕ್ಷ್ಮೀನಾರಾಯಣ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಕೃಷ್ಣಪ್ಪ ಗೌಡರವರು ಆಗಮಿಸಿ ಮಕ್ಕಳಿಗೆ ಉತ್ತಮ ಸಂಸ್ಕಾರ, ಶಿಸ್ತು, ಜೀವನದಲ್ಲಿ ಅಳವಡಿಸಿಕೊಂಡು, ಮುಂದೆ ಸತ್ಪ್ರಜೆಗಳಾಗಿ ಜೀವನ ಮಾಡಲು ಸಹಕಾರಿಯಾಗುತ್ತದೆ ಎಂದರು.

ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶಿವರಾಮ ಹೆಗ್ಡೆ, ಶಾಲಾ ಆಡಳಿತಾಧಿಕಾರಿ ಪ್ರಸಾದ್‌ಕುಮಾರ್, ವಾಣಿ ಅಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಸುಹಾಸಿನಿ, ಶಾಲಾ ವಿದ್ಯಾರ್ಥಿ ನಾಯಕಿ ನವಮಿ ಮತ್ತು ಶಾಲಾ ಉಪನಾಯಕ ಯಶ್ವಿತ್ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಸಾನ್ವಿ ಶೆಟ್ಟಿ ಸ್ವಾಗತಿಸಿ, ಅಬಿಜ್ಞಾ ಶೆಟ್ಟಿ ವಂದಿಸಿ, ತೃಪ್ತಿ ಮತ್ತು ಶಾಲಿನಿ ನಿರೂಪಿಸಿದರು.ಹಾಗು ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

Exit mobile version