ಲಾಯಿಲ: ಕೂಸಿನ ಮನೆಯ ನಿರ್ವಾಹಕರಿಗೆ ತರಬೇತಿ ಕಾರ್ಯಾಗಾರ ಆರಂಭ

0

ಬೆಳ್ತಂಗಡಿ: ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಗ್ರಾ.ಪಂಗಳಲ್ಲಿ ಕೂಸಿನ ಮನೆಗೆ ಆಯ್ಕೆಯಾದ ಶಿಶುಪಾಲನ ನಿರ್ವಾಹಕರಿಗೆ ಕೂಸಿನ‌ ಮನೆಗಳ ‌ನಿರ್ವಹಣೆಯ ಕುರಿತಾಗಿ ಮಕ್ಕಳ ಆರೈಕೆದಾರರಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಶಿಶುಪಾಲನಾ ನಿರ್ವಾಹಕರ ತರಬೇತಿ ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕಿನ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕುಸುಮಾಧರ್ ಬಿ.ಉದ್ಘಾಟಿಸಿದರು.

ಈ ಸಂದರ್ಭದಲ್ಲಿ SKDRDP ಗ್ರಾಮೀಣ ಶ್ರೇಷ್ಠತಾ ಕೇಂದ್ರದ ಪ್ರಾಂಶುಪಾಲರಾದ ಸೋಮನಾಥ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕರಾದ ವನಿತಾ, ಲಲಿತಾ, ಸಹಾಯಕ ಜಿಲ್ಲಾ ಕಾರ್ಯಕ್ರಮ ಸಮನ್ವಯ ಅಧಿಕಾರಿಯಾದ ಕಿಶನ್ ರಾವ್, ವಿಕೇಂದ್ರೀಕೃತ ತರಬೇತಿ ಸಂಯೋಜಕರಾದ ಪ್ರತಿಮಾ ರೈ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here