ಬೆಳ್ತಂಗಡಿ: ಸಹಕಾರಿ ಸಂಘದ ಸಾಧನೆಗಾಗಿ ಬೆಳ್ತಂಗಡಿಯ ಬಿ. ನಿರಂಜನ ಬಾವಂತಬೆಟ್ಟು ಅವರು ಪ್ರತಿಷ್ಠಿತ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ತಣ್ಣೀರುಪಂಥ ಬಾವಂತಬೆಟ್ಟು ನಿವಾಸಿಯಾಗಿರುವ ಬಿ.ನಿರಂಜನ ಅವರು ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ತಣ್ಣೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಆರಂಭಗೊಂಡ 1983ನೇ ಇಸವಿಯಿಂದ ಅಧ್ಯಕ್ಷರಾಗಿ ಸುದೀರ್ಘ 41 ವರ್ಷ ಕಾಲ ಸೇವೆ ಸಲ್ಲಿಸಿದ ಇವರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ, ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಸಹಕಾರಿ ಮತ್ತು ರಾಜಕೀಯ ರಂಗದಲ್ಲಿ ಸೇವೆ ಸಲ್ಲಿಸಿರುವ ಬಿ. ನಿರಂಜನ ಅವರ ಸಹಕಾರಿ ಕ್ಷೇತ್ರದ ಸಾಧನೆಗಾಗಿ ಸಹಕಾರಿ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.