Site icon Suddi Belthangady

ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ ವಿದ್ಯುತ್‌ ಶಾಕ್‌: ಮಲ್ಲರ್ಮಾಡಿ ನಿವಾಸಿ ಬಾಲಕೃಷ್ಣ ಶೆಟ್ಟಿ ಸಾವು

ಧರ್ಮಸ್ಥಳ: ಇಲ್ಲಿಯ ಮಲ್ಲರ್ಮಾಡಿ ಎಂಬಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ, ಕಾರ್ಮಿಕನೋರ್ವ ವಿದ್ಯುತ್‌ಶಾಕ್‌ಗೆ ಒಳಗಾಗಿ ಸಾವನ್ನಪ್ಪಿದ ಘಟನೆ ನ.24ರಂದು ಬೆಳಿಗ್ಗೆ ಸಂಭವಿಸಿದೆ.

ಧರ್ಮಸ್ಥಳ ಗ್ರಾಮದ ಮಲ್ಲರ್ಮಾಡಿ ನಿವಾಸಿ ಬಾಲಕೃಷ್ಣ ಶೆಟ್ಟಿ(49ವ) ಮೃತಪಟ್ಟವರು.

ಬೆಳಿಗ್ಗೆ ಸ್ಥಳೀಯ ನಿವಾಸಿ ಬೊಮ್ಮಣ್ಣ ಗೌಡ ಎಂಬವರ ಮನೆಗೆ ತೋಟದ ಕೆಲಸಕ್ಕೆ ಹೋಗಿದ್ದು ತೋಟದಲ್ಲಿ ಸೊಪ್ಪು ಕಡಿಯಲು ಅಲ್ಯೂಮಿನಿಯಂ ಏಣಿಯನ್ನು ಎತ್ತಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ತೋಟದ ನಡುವಿನಲ್ಲಿ ಹಾದುಹೋಗಿದ್ದ ವಿದ್ಯುತ್‌ಲೈನ್‌ಗೆ ತಾಗಿ ವಿದ್ಯುತ್‌ಶಾಕ್‌ ತಗಲಿ, ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದರೆನ್ನಲಾಗಿದೆ.ಕೂಡಲೇ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತಂದರೂ ಯಾವುದೇ ಪ್ರಯೋಜನವಾಗದೆ ಅವರು ದಾರಿ ಮಧ್ಯೆ ಮೃತಪಟ್ಟಿದ್ದರೆ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Exit mobile version