ಉಜಿರೆ: ಡಾ.ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ಸ್ವಚ್ಛತಾ ಅಭಿಯಾನ

0

ಉಜಿರೆ: ಪ್ರತಿಯೊಬ್ಬರಲ್ಲೂ ಸ್ವಚ್ಛತೆ ಅರಿವು ಮುಖ್ಯ.ಈ ದಿಶೆಯಲ್ಲಿ ವಿದ್ಯಾರ್ಥಿಗಳು ಇತರರಿಗೆ ಮಾದರಿಯಾಗಬೇಕು.ಈ ಮೂಲಕ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ ಎಂದು ಉಜಿರೆ ವಾಣಿಜ್ಯ ಹಾಗೂ ಕೈಗಾರಿಕಾ ಸಂಘದ ಅಧ್ಯಕ್ಷ ಅರವಿಂದ ಕಾರಂತ್ ಹೇಳಿದರು.

ಇವರು ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ವೀರೇಂದ್ರ ಹೆಗ್ಗಡೆ ಅವರ ಜನ್ಮದಿನದ ಅಂಗವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳ ಸಹಯೋಗದಲ್ಲಿ ನಡೆದ ಉಜಿರೆಯ ಸ್ವಚ್ಛತಾ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಲ್ಲಿ ಮೊದಲಾಗಿ ಸ್ವಚ್ಛತೆ ಅರಿವು ಇರಬೇಕು.ತನ್ಮೂಲಕ ನಾವು ಇತರರಲ್ಲಿ ಸ್ವಚ್ಛತೆಯ ಜಾಗೃತಿ ಮೂಡಿಸಲು ಸಾಧ್ಯ ಎಂದರು.
ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಬೇಬಿ, ಮನಃಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ಯಾಮಿಲ, ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್, ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್, ನಾಯಕಿ ದಕ್ಷಾ ಉಪಸ್ಥಿತರಿದ್ದರು.

ಸ್ವಯಂ ಸೇವಕಿ ಹರ್ಷಿತಾ ನಿರೂಪಿಸಿ, ವಂದಿಸಿದರು.

p>

LEAVE A REPLY

Please enter your comment!
Please enter your name here