ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಎನ್.ಎಸ್.ಎಸ್, ರೋವರ್ಸ್ ರೇಂಜರ್, ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಸಮಾರೋಪ ಸಮಾರಂಭ ಮತ್ತು ಪರಿಸರ ಸಂರಕ್ಷಣೆ ಜಾಗೃತಿ ಕಾರ್ಯಕ್ರಮವು ನ.25ರಂದು ನಡೆಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾಲೇಜಿನ ಕ್ಷೇಮಪಾಲನಾ ಅಧಿಕಾರಿಗಳು ಹಾಗೂ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ.ಪ್ರಕಾಶ್ ಕ್ರಮಧಾರಿ ಮಾತನಾಡಿ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಮಹತ್ವವನ್ನು ಹಾಗೂ ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಎಂದು ಸಂದೇಶ ಸಾರಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಅಲೆಕ್ಸ್ ಐವನ್ ಸೀಕ್ವೇರಾರವರು ಮಾತಾಡಿ ಭಾಷಾ ಸೌಹಾರ್ದತೆ, ಪರಿಸರ ಸಂರಕ್ಷಣೆ ಕುರಿತು ಅರಿವು ಮೂಡಿಸಿದರು.
ಈ ಕಾರ್ಯಕ್ರಮಕ್ಕೂ ಮುಂಚೆ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂ ಸೇವಕ ಸೇವಕಿಯರು ಹಾಗೂ ರೋವರ್ಸ್ ರೇಂಜರ್ ಘಟಕದ ವಿದ್ಯಾರ್ಥಿಗಳು ಸ್ವಚ್ಛತಾ ಜಾಥಾದಲ್ಲಿ ಪಾಲ್ಗೊಂಡರು.ಈ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಪ್ರೊ ಅಲೆಕ್ಸ್ ಐವನ್ ಸೀಕ್ವೇರ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿಗಳಾದ ಪ್ರಶಾಂತ್ ಎಂ, ಜೀವಾ ವಿ ಸಿ., ರಕ್ಷಿತಾ ಶೆಟ್ಟಿ, ರೋವರ್ಸ್ ರೇಂಜರ್ ಘಟಕದ ನಾಯಕರಾದ ಪ್ರೀತಿ ಡಿಸೋಜ, ಶ್ರೀನಾಥ್ ಬಿ ಎಸ್, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂ ಸೇವಕ ಸೇವಕಿಯರು ರೋವರ್ಸ್ ರೇಂಜರ್ ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಸ್ವಯಂ ಸೇವಕಿ ಪ್ರಿಯಾಂಕ ರವರು ನಿರೂಪಿಸಿದರು. ವಿಖಿತ ಸ್ವಾಗತಿಸಿ, ವಿಲ್ಸನ್ ವಂದಿಸಿದರು.