ನಗರ ಕಾಂಗ್ರೆಸ್ ವೀಕ್ಷಕರಾಗಿ ಎಚ್.ಮಹಮ್ಮದ್ ಅಲಿ ನೇಮಕ

0

ಬೆಳ್ತಂಗಡಿ: ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್.ಮಹಮ್ಮದ್ ಅಲಿ ಅವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್ ನೇಮಕಗೊಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಕಾರ್ಯತಂತ್ರ ರೂಪಿಸಲು, ಪಕ್ಷ ಸಂಘಟನೆಗಾಗಿ ಸೂಕ್ತ ಸಲಹೆ ಸೂಚನೆ ನೀಡಲು ಮತ್ತು ಇವೆಲ್ಲದರ ಮೇಲ್ವಿಚಾರಣೆ ನೋಡಿಕೊಳ್ಳಲು ಬೆಳ್ತಂಗಡಿ ನಗರ ಬ್ಲಾಕ್‌ಗೆ ಚುನಾವಣೆ ವೀಕ್ಷಕರಾಗಿ ನೇಮಕಗೊಂಡಿರುವ ಎಚ್.ಮಹಮ್ಮದ್ ಅಲಿಯವರು ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿಯೂ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಪುತ್ತೂರು ಪುರಸಭೆ ಮತ್ತು ನಗರಸಭೆಯ ಸದಸ್ಯರಾಗಿ, ವಿಪಕ್ಷ ನಾಯಕರಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರುವ ಮಹಮ್ಮದ್ ಆಲಿಯವರು ಪಕ್ಷದ ಕಾರ್ಯ ಚಟುವಟಿಕೆಗಳಲ್ಲಿ ಸಂಘಟನಾ ಚತುರರಾಗಿದ್ದಾರೆ.

LEAVE A REPLY

Please enter your comment!
Please enter your name here