ಶ್ರೀ ಧ.ಮಂ.ಇಂಜಿನಿಯರಿಂಗ್ ಕಾಲೇಜಿನಲ್ಲಿ ಡಾ|ಡಿ.ವೀರೇಂದ್ರ ಹೆಗ್ಗಡೆಯವರ ಜನ್ಮ ದಿನಾಚರಣೆ- ಗ್ರಾಮಾಭಿವೃದ್ಧಿ ಯೋಜನೆಯ ಪರಿಚಯ

0

ಉಜಿರೆ: ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆಯವರ ಜನ್ಮದಿನಾಚರಣೆಯ ಪ್ರಯುಕ್ತ, ಶ್ರೀ ಧ.ಮಂ.ಇಂಜಿನಿಯರಿಂಗ್ ಕಾಲೇಜಿನಲ್ಲಿ ನ.25ರಂದು ವಿದ್ಯಾರ್ಥಿಗಳಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಬಗ್ಗೆ ಗ್ರಾಮಾಭಿವೃದ್ಧಿ ಯೋಜನೆಯ ಮಾನವ ಸಂಪನ್ಮೂಲ ಆಧಿಕಾರಿ ಶ್ರೀನಿವಾಸ್ ಮಾಹಿತಿ ನೀಡಿದರು.

1982ರಲ್ಲಿ ಬೆಳ್ತಂಗಡಿ ತಾಲೂಕಿನ ಪ್ರತಿ ಹಳ್ಳಿಗಳ ಮೂಲಭೂತ ವ್ಯವಸ್ಥೆಯ ಅಭಿವೃದ್ಧಿಗಾಗಿ ಧರ್ಮಾಧಿಕಾರಿಗಳಾದ ಡಾ.ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿತ್ವದಿಂದ ಪ್ರಾರಂಭವಾದ ಯೋಜನೆ, ಇಂದು ಬೃಹದಾಕಾರವಾಗಿ ಬೆಳೆದು ರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧವಾಗಿದೆ.

ಇದರೊಂದಿಗೆ ಗ್ರಾಮಾಭಿವೃದ್ಧಿಯ ವಿವಿಧ ಯೋಜನೆಗಳಾದ ಸಂಪೂರ್ಣ ಸುರಕ್ಷಾ ಯೋಜನೆ, ಸಮುದಾಯ ಅಭಿವೃದ್ಧಿ ಯೋಜನೆ, ಕೆರಗಳ ಅಭಿವೃದ್ಧಿ, ಶುದ್ದ ಗಂಗಾ ಯೋಜನೆ, ಪ್ರಗತಿನಿಧಿ, ಮದ್ಯವರ್ಜನಾ ಶಿಬಿರ ಮತ್ತು ನಿರಂತರ ಪತ್ರಿಕೆ ಬಗ್ಗೆಯೂ ಶ್ರೀಯುತರು ವಿದ್ಯಾರ್ಥಿಗಳೊಂದಿಗೆ ಮಾಹಿತಿ ಹಂಚಿಕೊಂಡರು.

ಸಿವಿಲ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ|ಕೃಷ್ಣಪ್ರಾಸಾದ್ ಸ್ವಾಗತಿಸಿ, ನಿರೂಪಿಸಿದರು.

p>

LEAVE A REPLY

Please enter your comment!
Please enter your name here