ನ.29: ‘ಹೈಪರ್ ಲೋಕಲ್ ಮೀಡಿಯಾ- ಆಪರೇಶನ್ ಆ್ಯಂಡ್ ಸಸ್ಟೇನೇಬಿಲಿಟಿ’ ರಾಜ್ಯಮಟ್ಟದ ಕಾರ್ಯಾಗಾರ

0

ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ಮಂಗಳೂರಿನ ಮೀಡಿಯಾ ಆಲಮ್ನಿ ಅಸೋಸಿಯೇಶನ್ ಆಫ್ ಮಂಗಳಗಂಗೋತ್ರಿ (ಮಾಮ್) ಸಂಘಟನೆ ಸಹಯೋಗದಲ್ಲಿ ‘ಹೈಪರ್ ಲೋಕಲ್ ಮೀಡಿಯಾ: ಆಪರೇಶನ್ ಆ್ಯಂಡ್ ಸಸ್ಟೇನೇಬಿಲಿಟಿ’ ಕುರಿತ ರಾಜ್ಯಮಟ್ಟದ ಕಾರ್ಯಾಗಾರವು ನ. 29ರಂದು ಕಾಲೇಜಿನ ಸೆಮಿನಾರ್ ಹಾಲ್’ನಲ್ಲಿ ನಡೆಯಲಿದೆ.

ಸುದ್ದಿ ಬಿಡುಗಡೆ ವಾರಪತ್ರಿಕೆಯ ಸಂಪಾದಕ ಹಾಗೂ ಸುದ್ದಿ ಗ್ರೂಪ್ ಆಫ್ ಕಂಪನೀಸ್ ಅಧ್ಯಕ್ಷ ಡಾ.ಯು.ಪಿ.ಶಿವಾನಂದ ರವರು ಬೆಳಗ್ಗೆ 10ಕ್ಕೆ ಉದ್ಘಾಟನೆ ನೆರವೇರಿಸಲಿದ್ದಾರೆ.

ಮಾಮ್ ಸಂಘಟನೆಯ ಅಧ್ಯಕ್ಷ ನವೀನ್ ಅಮ್ಮೆಂಬಳ ಹಾಗೂ ಗೌರವಾಧ್ಯಕ್ಷ ವೇಣು ಶರ್ಮ ರವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎ.ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ ಉಪಸ್ಥಿತರಿರಲಿದ್ದಾರೆ.

ಅಪರಾಹ್ನ 3.45ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಉಜಿರೆ ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ವಿಶ್ವನಾಥ ಪಿ. ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

LEAVE A REPLY

Please enter your comment!
Please enter your name here