ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯಲ್ಲಿ ಎಸ್.ಡಿ.ಎಂ ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ಮಾನವ ಸಂಪನ್ಮೂಲ ಕೇಂದ್ರವು ಆಯೋಜಿಸಿದ Digital literacy ಕಾರ್ಯಕ್ರಮದ ಅಡಿಯಲ್ಲಿ ವಾಣಿಜ್ಯ ವ್ಯವಹಾರಗಳ ಅಧ್ಯಯನದಲ್ಲಿ ಯಾಂತ್ರಿಕ ಬುದ್ಧಿಮತ್ತೆಯ ಪಾತ್ರದ ಕುರಿತು ವಾರಾಣಾಸಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದು ಪಸ್ತುತ ಆಲೈನ್ಸ್ ವಿಶ್ವವಿದ್ಯಾಲಯದಲ್ಲಿ ಪ್ರಾದ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ.ವಿವೇಕ್ ಮಿಶ್ರಾ ಮತ್ತು ಆಲೈನ್ಸ್ ವಿಶ್ವವಿದ್ಯಾಲಯದಲ್ಲಿ ತರಬೇತಿ ಮತ್ತು ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರು ಆಗಿರುವ ಡಾ.ಬಾಲಾಜಿ ವೃತ್ತಿ ರವರು ವಿಷೇಶ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು.
ಕೃತಕ ಬುದ್ಧಿಮತ್ತೆ ಭವಿಷ್ಯದಲ್ಲಿ ವ್ಯಾಪಕ ಉದ್ಯೋಗಾವಕಾಶ ಸೃಷ್ಟಿಸಲಿದ್ದು ವಾಣಿಜ್ಯ ವ್ಯವಹಾರದಲ್ಲಿ ಅನಿವಾರ್ಯ ಆಗಲಿದೆ.ಆದ್ದರಿಂದ ವಿದ್ಯಾರ್ಥಿಗಳು ಯಾಂತ್ರಿಕ ಬುದ್ಧಿಮತ್ತೆ ಕುರಿತು ಉನ್ನತ ವ್ಯಾಸಂಗ ಮಾಡಿದರೆ ಉದ್ಯೋಗ ಅವಕಾಶಗಳು ತುಂಬಾ ಇದೆ ಎನ್ನುವ ಕುರಿತು ಅರಿವು ಮೂಡಿಸಿದರು.
ಈ ಸರಣಿ ಉಪನ್ಯಾಸ ಕಾರ್ಯಕ್ರಮದಲ್ಲಿ ಬಿ.ಕಾಮ್, ಬಿಸಿಎ ಮತ್ತು ಬಿಬಿಎ ವಿದ್ಯಾರ್ಥಿಗಳಿಗೆ ಭಾಗವಹಿಸಿದ್ದರು.ಒಟ್ಟು 254 ವಿದ್ಯಾರ್ಥಿಗಳು ಭಾಗವಹಿಸಿ ಪ್ರಯೋಜನವನ್ನು ಪಡೆದುಕೊಂಡರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಎ.ಕುಮಾರ ಹೆಗ್ಡೆ ಯವರ ಮಾರ್ಗದರ್ಶನದಲ್ಲಿ ತರಬೇತಿ ಮತ್ತು ವೃತ್ತಿ ಮಾರ್ಗದರ್ಶನ ವಿಭಾಗದ ಸಂಯೋಜಕರಾದ ಡಾ.ನಾಗರಾಜ ಪೂಜಾರಿ ಮತ್ತು ಸೌಮ್ಯ ಕುಮಾರಿ ಯವರು ಯಶಸ್ವಿಯಾಗಿ ತರಬೇತಿ ಕಾರ್ಯಾಗಾರನ್ನು ಸಂಘಟಿಸಿ ನಿರ್ವಹಣೆ ಮಾಡಿದರು.