ಭಾರತ್ ಸ್ಕೌಟ್ಸ್ ಗೈಡ್ಸ್ ನಿಂದ ವೀರಯೋಧ ಸ್ಕೌಟ್ ಕ್ಯಾಪ್ಟನ್ ಎಂ.ಎ.ಪ್ರಾಂಜಲ್ ಗೆ ಶ್ರದ್ಧಾಂಜಲಿ

0

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಶ್ರೀ ಮಂಜುನಾಥ ದಳದ ಕಬ್ ಬುಲ್ ಬುಲ್ ಸ್ಕೌಟ್ ಗೈಡ್ ಗಳಿಂದ, ರಾಷ್ಟ್ರಪತಿ ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಾಲ್ ಗೆ ನುಡಿ ನಮನ ಸಲ್ಲಿಸಲಾಯಿತು.

ಈ ನುಡಿ ನಮನ ಕಾರ್ಯಕ್ರಮದಲ್ಲಿ ಜಿಲ್ಲಾ ಸಹಾಯಕ ಆಯುಕ್ತರಾದ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಬಿ.ಸೋಮಶೇಖರ್ ಶೆಟ್ಟಿ ಭಾಗವಹಿಸಿ ಅಗಲಿದ ವೀರ ಯೋಧನಿಗೆ ಪುಷ್ಪ ನಮನ ಸಲ್ಲಿಸಿದರು.ತದನಂತರ ವೀರ ಯೋಧನಿಗೆ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಹೇಮಲತಾ ಎಂ ಆರ್ ಉಪಸ್ಥಿತರಿದ್ದರು.ಸ್ಕೌಟ್ ಮಾಸ್ಟರ್ ಮಂಜುನಾಥ್ ಹಾಗೂ ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಪ್ರಾಪ್ತಿ ವಿ ಶೆಟ್ಟಿ ನಿರೂಪಿಸಿ ಸ್ಧಳೀಯ ಸಂಸ್ದೆಯ ಕಾರ್ಯದರ್ಶಿ , ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸಂಯೋಜಕಿ ಶಿಕ್ಷಕ ಪ್ರಮೀಳ ನಿರ್ವಹಿಸಿ ಗೈಡ್ ಸಿಂಚನ ನಿರ್ವಹಿಸಿಕೊಟ್ಟರು.

LEAVE A REPLY

Please enter your comment!
Please enter your name here