ಬೆಳ್ತಂಗಡಿ: ‘ಕ್ರೀಡಾಕೂಟ ಆರೋಗ್ಯ ವರ್ಧಕ ಕ್ರೀಡೆಯನ್ನು ಬದುಕಿನ ಭಾಗವಾಗಿಸಿಕೊಂಡರೆ ನಮ್ಮ ಬದುಕಿನ ಕೊನೆಯವರೆಗೆ ಆರೋಗ್ಯ ನೀಡುತ್ತದೆ’ ಎಂದು ವಕೀಲ ಸುದರ್ಶನ್ ರಾವ್ ಗಜಂತೋಡಿ ಹೇಳಿದರು.
ಅವರು ನ.28ರಂದು ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಮತ್ತು ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾ ಕೂಟ ಉದ್ಘಾಟಿಸಿ ಮಾತನಾಡಿದರು.
‘ಯಾವುದೇ ಕ್ರೀಡೆಯನ್ನು ನಿರ್ಲಕ್ಷಿಸಬಾರದು. ಕೇವಲ ಕ್ರಿಕೆಟ್ ಮಾತ್ರ ಅಲ್ಲದೆ ಬೇರೆ ಎಲ್ಲಾ ಕ್ರೀಡೆಗಳ ಜೊತೆ ಭಾಗವಹಿಸಬೇಕು’ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಕೆ. ವಸಂತ ಬಂಗೇರ ಮಾತನಾಡಿ, ‘ ಕ್ರೀಡೆಯಲ್ಲಿ ಭಾಗವಹಿಸುವ ಮನಸ್ಸನ್ನು ಎಲ್ಲಾ ವಿದ್ಯಾರ್ಥಿಗಳು ಹೊಂದಬೇಕು. ಕ್ರೀಡಾ ಸ್ಫೂರ್ತಿಯಿಂದ ಪ್ರೋತ್ಸಾಹಿಸಬೇಕು’ ಎಂದರು.
ವೇದಿಕೆಯಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿರಾಮ್ ಶೆಟ್ಟಿ ಇದ್ದರು.
ತೃತೀಯ ಬಿ.ಕಾಂ ವಿದ್ಯಾರ್ಥಿನಿ ಕಾವ್ಯ ಪ್ರತಿಜ್ಞಾ ವಿಧಿ ಬೋಧಿಸಿದರು.
ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ.ಸವಿತಾ ಪ್ರಸ್ತಾವಿಕವಾಗಿ ಮಾತನಾಡಿದರು.ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಸಮೀವುಲ್ಲಾ ಸ್ವಾಗತಿಸಿದರು.ಉಪನ್ಯಾಸಕಿ ಅಕ್ಷತಾ ಪರಿಚಯಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ವಂದಿಸಿದರು. ಕನ್ನಡ ಭಾಷಾ ಉಪನ್ಯಾಸಕ ರಾಕೇಶ್ ಕುಮಾರ್ ಹಾಗೂ ಗಣಕ ವಿಜ್ಞಾನ ಉಪನ್ಯಾಸಕಿ ಶುಭಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.