ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಲಕ್ಷದೀಪೋತ್ಸವದ ಪ್ರಯುಕ್ತ ನಡೆಯಲಿರುವ ಪಾದಯಾತ್ರೆಯ ಪೂರ್ವಭಾವಿ ಸಭೆ ತಣ್ಣೀರುಪಂತ ವಲಯದ ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷ ಪ್ರಭಾಕರ ಗೌಡ ಪೊಸಂದೋಡಿ ಅಧ್ಯಕ್ಷತೆಯಲ್ಲಿ ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಭವನದಲ್ಲಿ ನ.29ರಂದು ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಮಾತನಾಡಿ ಭಕ್ತಿಯಿಂದ ಎಲ್ಲಾ ಭಕ್ತಾದಿಗಳು ಪಾದಯಾತ್ರೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದರು. ನಿವೃತ್ತ ಪೊಲೀಸ್ ಅಧಿಕಾರಿ ಸುದರ್ಶನ್ ಕೊಲ್ಲಿ ಮಾತನಾಡಿ ಶ್ರದ್ಧಾ ಭಕ್ತಿಯಿಂದ ತಾವೆಲ್ಲರೂ ಭಾಗವಹಿಸಿ ಪಾದಯಾತ್ರೆಯನ್ನು ಯಶಸ್ವಿಗೊಳಿಸಬೇಕೆಂದು ಹೇಳಿದರು.
ವೇದಿಕೆಯಲ್ಲಿ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಯೋಜನಾಧಿಕಾರಿ ದಯಾನಂದ ಪೂಜಾರಿ, ಪ್ರಗತಿಬಂಧು ಸ್ವ ಸಹಾಯ ಸಂಘದ ವಲಯದ ಅಧ್ಯಕ್ಷ ರಾಮಣ್ಣ ಗೌಡ, ಜನಜಾಗೃತಿ ವೇದಿಕೆಯ ತಾಲೂಕು ಕಾರ್ಯಕಾರಿಣಿ ಸಮಿತಿಯ ಸದಸ್ಯ ಗುಣಕರ ಅಗ್ನಾಡಿ ಉಪಸ್ಥಿತರಿದ್ದರು.
ಸಭೆಯಲ್ಲಿ ವಲಯದ ಪ್ರಮುಖರು, ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರು, ಜನಜಾಗೃತಿ ವೇದಿಕೆಯ ಕಾರ್ಯಕಾರಿಣಿ ಸದಸ್ಯರುಗಳು, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಭಜನಾ ಮಂಡಳಿಯ ಅಧ್ಯಕ್ಷರುಗಳು, ಪದಾಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ವಿಪತ್ತು ನಿರ್ವಹಣ ತಂಡದ ಸ್ವಯಂಸೇವಕರು ಮತ್ತು ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.
ತಣ್ಣೀರುಪಂತ ವಲಯ ಮೇಲ್ವಿಚಾರಕಿ ವಿದ್ಯಾ ಸ್ವಾಗತಿಸಿ, ಜನಜಾಗೃತಿ ವೇದಿಕೆಯ ಗ್ರಾಮ ಸಮಿತಿಯ ಅಧ್ಯಕ್ಷ ರಾಜಶೇಖರ್ ವಂದಿಸಿ, ಸೇವಾಪ್ರತಿನಿಧಿ ಶಿವರಾಮ್ ನಿರೂಪಿಸಿದರು.